ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣರ ಭಾವಚಿತ್ರ ಬಿಡುಗಡೆ, ಫೆ.17ರಿಂದ ಸರ್ಕಾರಿ ಕಚೇರಿಗಳಲ್ಲಿ ಅಳವಡಿಕೆ

Date:

Advertisements

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಮತ್ತು ವಚನ‌ ವಿವೇಕ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, “ಫೆ.17 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಸವಣ್ಣರ ನೂತನ ಭಾವಚಿತ್ರ ಅನಾವರಣಗೊಳಿಸಲಾಗುತ್ತದೆ.‌ ಪ್ರತಿ ಭಾವಚಿತ್ರದ‌‌ ಕೆಳಗಡೆ ಸಾಂಸ್ಕೃತಿಕ ನಾಯಕ ಬಸವಣ್ಣ ಅಂತ ಬರೆಯುತ್ತೇವೆ. ಬುದ್ಧ, ಬಸವಣ್ಣ, ಗಾಂಧಿ ಹಾಗೂ ಅಂಬೇಡ್ಕರ್ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತದೆ. ಇವರು ನಮ್ಮ ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಿ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಿದ್ದಾರೆ” ಎಂದರು.

“ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಹೊಸ ಭಾವಚಿತ್ರ ಮೌಢ್ಯಗಳನ್ನು ಸಮಾಜದಲ್ಲಿ ನೋಡಿದ್ದೇವೆ. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು. ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬದುಕುವ ವ್ಯವಸ್ಥೆ ನಿರ್ಮಾಣ ಆಗಬೇಕು ಎಂದು ಬಸವಣ್ಣ ಕನಸು ಕಂಡಿದ್ದರು. ಅದರಂತೆಯೇ ಬಸವಣ್ಣ ನಡೆದುಕೊಂಡಿದ್ದರು. ಇದು ಜನಪರವಾದ ಸಮಾಜ. ಆಡು ಮಾತಿನಲ್ಲೇ ಬಸವಣ್ಣ ವಚನ ರೂಪಿಸಿದ್ದವರು. ಜನರಿಗೆ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚನೆ‌ ಮಾಡಿದ್ದಾರೆ” ಎಂದರು.

Advertisements

“ಅಧಿಕಾರ ಹಾಗೂ ಸಂಪತ್ತು ಬಲಾಢ್ಯರ ಕೈಯಲ್ಲಿ ಹೋಗಬಾರದು. ವಿದ್ಯಾವಂತರು ಸಹ ತಮ್ಮ ಹಣೆಬರಹ ಸರಿಯಿಲ್ಲ ಅಂತಾರೆ. ದೇವರು ಬಡವನಾಗಿರು ಅಂತ ಬರಿತಾರಾ? ದೇವರು ಕರುಣಾಮಯಿ ಅಂತಾರಲ್ವಾ? ಇದೆಲ್ಲಾ ಸ್ವಾರ್ಥಿಗಳು ಹೇಳಿದ ಮಾತುಗಳು. ಕಾಯಕ ಮಾಡಿದವರೆಲ್ಲಾ ಶ್ರೀಮಂತರು, ಕಾಯಕ ಮಾಡದವರೆಲ್ಲಾ ಬಡವರು. ಸಂಸದೀಯ ವ್ಯವಸ್ಥೆ ನಮ್ಮ ಕಾಲದಲ್ಲೇ ಬಂದಿದೆ. ಬ್ರಿಟಿಷರ ಕಾಲದಲ್ಲಿ ಸಂಸದೀಯ ವ್ಯವಸ್ಥೆ ಬಂದಿದೆ ಅಂತಾರೆ. ಇದು ತಪ್ಪು, ಯಾಕೆಂದರೆ ಬಸವಣ್ಣರ ಕಾಲದಲ್ಲೇ ಸಂಸದೀಯ ವ್ಯವಸ್ಥೆ ಬಂದಿತ್ತು. ಬಸವಣ್ಣರು ಅನುಭವ ಮಂಟಪ ಸ್ಥಾಪನೆ ಮಾಡಿದ್ದರು” ಎಂದು ಸಿಎಂ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಜೆಟ್‌ ಅಧಿವೇಶನ | ₹50 ಸಾವಿರ ಕೋಟಿ ಹೂಡಿಕೆ, 58 ಸಾವಿರ ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ್

“ಅಲ್ಲಿ ಮೌಢ್ಯ, ಕಂದಾಚಾರ, ಸಮಸ್ಯೆಗಳು ಅನುಭವ ಮಂಟಪದಲ್ಲಿ ಚರ್ಚೆ ಆಗುತ್ತಿತ್ತು. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮಹಿಳೆಯರ ವಿಚಾರದಲ್ಲಿ ಬಹಳ ಕೆಟ್ಟ ಪದ್ಧತಿ ಇತ್ತು. ಆರ್ಥಿಕ ಚಲನೆ ಆದರೆ ಮಾತ್ರವೇ ಪ್ರತಿಯೊಂದು ಜಾತಿ ಗಟ್ಟಿಯಾಗಿ ನೆಲೆ ನಿಲ್ಲುತ್ತದೆ. ಮನುವಾದಿಗಳು ಕೆಟ್ಟ ಸಮಾಜ ನಿರ್ಮಾಣ ಮಾಡಿದ್ದರು. ಅದನ್ನು ಹೋಗಲಾಡಿಸುವ ಸಲುವಾಗಿ ಬಸವಣ್ಣ ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನ ದ್ವೇಷಿಸಿದರೆ ದುರ್ಗುಣ. ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿದ್ನಾ? ನಾನು ಹುಟ್ಟಿದ್ದೇನೆ. ಜಾತಿ ವ್ಯವಸ್ಥೆ ಇದೆ” ಎಂದರು.

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಸಭಾಪತಿ

ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, “ಕರ್ನಾಟಕದಲ್ಲಿ ಅನೇಕ ಸರ್ಕಾರಗಳು ಬಂದು ಹೋಗಿವೆ. ಅನೇಕ ಮುಖ್ಯಮಂತ್ರಿಗಳು ಸಹ ಬಂದು ಹೋಗಿದ್ದಾರೆ. ಆದರೆ ಇಂದು ಸಿದ್ದರಾಮಯ್ಯ ಅವರು ಬಸವೇಶ್ವರರ ಫೋಟೋ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಇಡಬೇಕು ಎಂಬ ನಿರ್ಧಾರ ಮಾಡಿದ್ದಾರೆ. ಮೊಟ್ಟ ಮೊದಲು ಸಿದ್ದರಾಮಯ್ಯ ತೆಗೆದುಕೊಂಡ ನಿರ್ಧಾರ ಇಂದು ಇಡೀ ದೇಶಕ್ಕೆ ಮಾದರಿ ಆಗಿದೆ” ಎಂದರು.

ಈ ವೇಳೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ‌ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X