ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಸಿಎಂ ಡಿ ಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಎಫ್‌ಐಆರ್‌

Date:

Advertisements

ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

2013ರ ಏಪ್ರಿಲ್‌ 1ರಿಂದ 2018ರ ಏಪ್ರಿಲ್‌ 30ರ ಅವಧಿಯಲ್ಲಿ ಅಕ್ರಮವಾಗಿ ₹74.93 ಕೋಟಿ ಮೌಲ್ಯದ ಆಸ್ತಿ ಗಳಿಸಿರುವ ಆರೋಪ ಡಿ ಕೆ ಶಿವಕುಮಾರ್‌ ಮೇಲೆ ಕೇಳಿಬಂದಿದೆ.

2020ರ ಅಕ್ಟೋಬರ್‌ 3ರಂದು ಇದೇ ಆರೋಪದಡಿ ಡಿ ಕೆ ಶಿವಕುಮಾರ್‌ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಸಿಬಿಐ, ತನಿಖೆ ನಡೆಸುತ್ತಿತ್ತು. ಆದರೆ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದು, ಶಿವಕುಮಾರ್‌ ವಿರುದ್ಧದ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವಹಿಸುವ ತೀರ್ಮಾನವನ್ನು 2023ರ ನವೆಂಬರ್‌ 23ರಂದು ಕೈಗೊಂಡಿತ್ತು.

Advertisements

“ಸಿಬಿಐ ಅಧಿಕಾರಿಗಳು 2020ರ ಅ. 3ರಂದು ಶಿವಕುಮಾರ್‌ ವಿರುದ್ಧ ದಾಖಲಿಸಿದ್ದ ಎಫ್‌ಐಆರ್‌ನಲ್ಲಿದ್ದ ಅಂಶಗಳನ್ನೇ ನಾವು ದಾಖಲಿಸಿರುವ ಎಫ್‌ಐಆರ್‌ನಲ್ಲೂ ಉಲ್ಲೇಖಿಸಿದ್ದೇವೆ. ರಾಜ್ಯ ಸರ್ಕಾರದ ಆದೇಶದಂತೆ ಲೋಕಾಯುಕ್ತ ಪೊಲೀಸ್‌ ವಿಭಾಗವು ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ. ಪ್ರಕರಣದ ತನಿಖೆಯನ್ನು ಪ್ರತ್ಯೇಕ ತಂಡಕ್ಕೆ ವಹಿಸಲಾಗಿದೆ” ಎಂದು ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

2013ರ ಮಾರ್ಚ್‌ 31ರ ವೇಳೆಗೆ ಶಿವಕುಮಾರ್‌ ಕುಟುಂಬ ₹33.92 ಕೋಟಿ ಮೌಲ್ಯದ ಆಸ್ತಿ ಹೊಂದಿತ್ತು. ಐದು ವರ್ಷಗಳ ಅವಧಿಯಲ್ಲಿ ಅವರ ಕುಟುಂಬ ₹166.79 ಕೋಟಿಯನ್ನು ವರಮಾನ ಮತ್ತು ಇತರ ರೂಪದಲ್ಲಿ ಪಡೆದಿದೆ. ಇದೇ ಅವಧಿಯಲ್ಲಿ ₹ 113.12 ಕೋಟಿ ವೆಚ್ಚ ಮಾಡಲಾಗಿದೆ ಎಂಬ ಅಂಶ ಸಿಬಿಐ ಎಫ್‌ಐಆರ್‌ನಲ್ಲಿದೆ.

“2018ರ ಏ.30ರ ವೇಳೆಗೆ ಆರೋಪಿತರ ಕುಟುಂಬ ₹ 128.60 ಕೋಟಿ ಆಸ್ತಿ ಹೊಂದಿತ್ತು. ವರಮಾನ, ಸ್ವೀಕೃತಿ ಮತ್ತು ವೆಚ್ಚಕ್ಕೆ ಹೋಲಿಸಿದರೆ ಶೇಕಡ 44.93ರಷ್ಟು ಹೆಚ್ಚುವರಿ ಆಸ್ತಿ ಇರುವುದು ಪ್ರಾಥಮಿಕ ತನಿಖೆ ವೇಳೆ ಪತ್ತೆಯಾಗಿದೆ” ಎಂದು ಸಿಬಿಐ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X