ಹಾಸನ | ಬಗರ್ ಹುಕ್ಕುಂ ಭೂಮಿಗಾಗಿ ಕರ್ನಾಟಕ ಪ್ರಾಂತ ರೈತ ಸಂಘಟನೆಯಿಂದ ಪ್ರತಿಭಟನೆ

Date:

Advertisements

ಹಾಸನ ತಾಲೂಕು ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸ.ನಂ. 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸರ್ವೆ ಮಾಡಿ ಪೋಡಿ ಮಾಡಿಕೊಡಲು ಆಗ್ರಹಿಸಿ ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಹಾಸನ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, “ಲಕ್ಷ್ಮೀಸಾಗರ ಗ್ರಾಮದ ಸ.ನಂ 35ರಲ್ಲಿ 26 ಬಡ ದಲಿತ ಮತ್ತು ಹಿಂದುಳಿದ ಕುಟುಂಬಗಳಿಗೆ ತಲಾ 0.26 ಎಕ್ಕರೆ ಭೂಮಿಯನ್ನು 1977 ರಲ್ಲಿ ಬಗರ್ ಹುಕುಂ ಸಾಗುವಳಿಯ ಆಧಾರದಲ್ಲಿ ಮಂಜೂರು ಮಾಡಿ ಹಂಗಾಮಿ ಸಾಗುವಳಿ ಜೀಟಿಯನ್ನು ನೀಡಿದ್ದಾರೆ. ಅಲ್ಲಿಂದ ಇಲ್ಲಿಯವರೆಗೂ ನಿರಂತರವಾಗಿ ಈ ಎಲ್ಲಾ ಕುಟುಂಬಗಳು ಈ ಭೂಮಿಯನ್ನು ಸಾಗುವಳಿ ಮಾಡಿ ಬೆಳೆ ಬೆಳೆದು ಸ್ವಾಧೀನಾನುಭವದಲ್ಲಿರುತ್ತಾರೆ. ಪಹಣಿಗಳಲ್ಲೂ ಇವರುಗಳ ಹೆಸರುಗಳು ಬರುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

1997ರಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಾಸನದ ವಿಮಾನ ನಿಲ್ದಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿ ರೈತರು ಅನುಭವದಲ್ಲಿರುವ ಭೂಮಿಯಲ್ಲಿ ಸ್ವಲ್ಪ ಭಾಗವನ್ನು ಸ್ವಾಧೀನ ಪಡಿಸಿಕೊಂಡು ಪರಿಹಾರವನ್ನು ನೀಡಿದ್ದಾರೆ. ಆದರೆ, 26 ಕುಟುಂಬಗಳಿಗೆ ಮಂಜೂರಾಗಿದ್ದ ತಲಾ 0.26 ಎಕ್ಕರೆ ಜಾಗದಲ್ಲಿ ಕೆಐಡಿಬಿಯವರು ಭೂಸ್ವಾದೀನ ಮಾಡಿಕೊಂಡು ಉಳಿದಿರುವ ಭೂಮಿಯಲ್ಲಿ ರೈತರು ಈಗಲೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.

Advertisements

ಹಾಗಾಗಿ ರೈತರು ಈಗಲೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ಉಳಿಕೆ ಭೂಮಿಯನ್ನು ಸರ್ವೆ ಮಾಡಿ, ಗಡಿಗಳನ್ನು ಗುರುತಿಸಿ, ಹದ್ದು ಬಸ್ತ್ ಮೂಲಕ ಪೋಡಿ ಮಾಡಿಕೊಡಿ ಎಂದು ರೈತ ಸಂಘ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದೆ.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಆರ್. ನವೀನ್ ಕುಮಾರ್,  ದಲಿತ ಹಕ್ಕುಗಳ ಸಮಿತಿ ಮತ್ತು ಡಿವೈಎಫ್ಐ ಮುಖಂಡ ಪೃಥ್ವಿ ಎಂಜಿ, ಸಿಐಟಿಯು ಕಾರ್ಯದರ್ಶಿ ಅರವಿಂದ ಲಕ್ಷ್ಮೀ ಸಾಗರ ಗ್ರಾಮಸ್ಥರಾದ ಜಯಲಕ್ಷ್ಮಿ, ರಾಜೇಶ್, ಶ್ರೀನಿವಾಸ್, ಜಯಮ್ಮ, ಮೂರ್ತಿ, ಸ್ವಾಮಿ ಮುಂತಾದವರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X