2022-23ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ. ಅತಿಸಾರ, ತೀವ್ರ ಉಸಿರಾಟ ತೊಂದರೆ, ಅಪೌಷ್ಠಿಕತೆ, ಅವಧಿ ಪೂರ್ವ ಮಕ್ಕಳ ಜನನ, ಮನೆಯಲ್ಲಿ ಹೆರಿಗೆ ಸೇರಿದಂತೆ ಹಲವು ಕಾರಣಗಳಿಂದ ಶಿಶುಗಳು ಮೃತಪಟ್ಟಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಶಿಶುಗಳ ಸಾವಿನ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಶಿಶುಗಳ ಸಾವಿಗೆ ತಾಯಂದಿರ ಆರೈಕೆಯಲ್ಲಿನ ವ್ಯತ್ಯಾಸವೂ ಒಂದು ಕಾರಣವಾಗಿದೆ. ಹಾಗೆ ಮಾತೃ ಪೂರ್ಣ ಯೋಜನೆ, ಮಾತೃವಂದನಾ, ಪೌಷ್ಠಿಕ ಆಹಾರ ವಿತರಣೆ ಇತರೆ ಯೋಜನೆಗಳು ಜಿಲ್ಲೆಯಲ್ಲಿ ವಿಫಲವಾಗಿವೆ. ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರಿಯಾದ ಹೆರಿಗೆ ವ್ಯವಸ್ಥೆ ಇಲ್ಲವೆಂಬ ಎಂಬ ಆರೋಪಗಳು ಕೇಳಿಬಂದಿವೆ.
2022-23ರಲ್ಲಿ ರಾಜ್ಯದಲ್ಲಿ 8,805 ಶಿಶುಗಳು ಮೃತಪಟ್ಟಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ 1371, ಮೈಸೂರು ಜಿಲ್ಲೆಯಲ್ಲಿ 669, ರಾಯಚೂರ ಜಿಲ್ಲೆಯಲ್ಲಿ 633, ಬಳ್ಳಾರಿ ಜಿಲ್ಲೆಯಲ್ಲಿ 614 ಶಿಶುಗಳು ಮೃತಪಟ್ಟಿವೆ.
ಈ ಸುದ್ದಿ ಓದಿದ್ದೀರಾ? ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ
ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು ಬಳ್ಳಾರಿ ಜಿಲ್ಲಾಡಳಿತ ಮುಂದಾಗಿದ್ದು, “ಅಂಗನವಾಡಿ, ಆಶಾ ಕಾರ್ಯಕರ್ತರ ಮೂಲಕ ತಾಯಂದಿರಿಗೆ ತಲುಪಬೇಕಾದ ಪ್ರೋಟಿನ್‌ಗಳನ್ನು ಮುಟ್ಟಿಸಲು ಕ್ರಮ ಕೈಗೊಳ್ಳುತ್ತೇವೆ. ಒಂದು ವೇಳೆ ಯೋಜನೆಗಳು ತಲುಪಿಸಲು ವಿಫಲವಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.