ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಕರ್ ಶಾಸ್ತ್ರಿ ಅವರು ಇಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಭವ್ ಶಾಸ್ತ್ರಿ,” ಗೌರವಾನ್ವಿತ ಮಲ್ಲಿಕಾರ್ಜುನ ಖರ್ಗೆ ಅವರಿಗೆ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇಂತಿ ವಿಭಕರ್ ಶಾಸ್ತ್ರಿ” ಎಂದು ಬರೆದುಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸುವವರಿಗೆ ನೈತಿಕತೆ ಇದ್ದರೆ ಪ್ರಶ್ನೆಗೆ ಬೆಲೆ, ಅಲ್ಲವೇ?
ವಿಭಕರ್ ಶಾಸ್ತ್ರಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೆಶ್ ಪಾಠಕ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ವಿಭಕರ್ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗನಾಗಿದ್ದು, ಇವರ ಪುತ್ರ ಹರಿ ಕೃಷ್ಣ ಶಾಸ್ತ್ರಿ ಲೋಕಸಭಾ ಸದಸ್ಯರಾಗಿದ್ದರು.
Hon'ble Congress President Shri @kharge ji!
Respected Sir,
I hereby tender my resignation from the primary membership of Indian National Congress (@INCIndia)
Regards
Vibhakar Shastri— Vibhakar Shastri (@VShastri_) February 14, 2024