ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆ : ವಿದ್ಯಾರ್ಥಿಗಳಿಂದ ವಿರೋಧ

Date:

Advertisements

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಆಯೋಜಿಸಿದ ಸರಸ್ವತಿ ಪೂಜೆಗೆ ಕೆಲ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ.

ಫೆ.14ರಂದು ವಸಂತ ಪಂಚಮಿ ಹಿನ್ನಲೆ ಗ್ರಂಥಾಲಯದಲ್ಲಿರುವ ಸರಸ್ವತಿ ಮೂರ್ತಿಗೆ ಅಲಂಕರಿಸಿ ಪೂಜೆಗೆ ತಯಾರಿಸಲಾಗಿತ್ತು. ವಿವಿಯ ಕುಲಪತಿ ಸೇರಿದಂತೆ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿಗಳು ಈ ಪೂಜೆಯಲ್ಲಿ ಭಾಗವಹಿಸಿದರು. ಈ ವೇಳೆ ಸಂಶೋಧನಾ ವಿದ್ಯಾರ್ಥಿ ನಂದಕುಮಾರ್​ ನೇತ್ರತ್ವದಲ್ಲಿ ವಿವಿಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿ ವಿರೋಧಿಸಿದ್ದಾರೆ.

ಸಂಶೋಧನಾ ವಿದ್ಯಾರ್ಥಿ ನಂದಕುಮಾರ್​ ಮಾತನಾಡಿ, ಗ್ರಂಥಾಲಯದಲ್ಲಿ ಸರಸ್ವತಿ ಪೂಜೆ, ಮಂತ್ರ ಪಠಣ ನಡೆಸಲು ಇದು ದೇವಸ್ಥಾನವೋ, ಧರ್ಮ ಕ್ಷೇತ್ರವೋ? ಇದೆಲ್ಲ ಮಾಡಲು ಅಧಿಕಾರ ಕೊಟ್ಟವರು ಯಾರು? ಮನಸ್ಸಿಗೆ ಬಂದಂತೆ ಪೂಜೆ ಮಾಡುವುದಾದರೆ ಗುಡಿಗೆ ಹೋಗಿ ಗಂಟೆ ಬಾರಿಸುತ್ತ ಕುಳಿತುಕೊಳ್ಳಿ ಇಲ್ಲೇಕೆ ಬಂದಿರಿ” ಎಂದು ಗ್ರಂಥಾಲಯ ಮುಖ್ಯಸ್ಥ ಪರಶುರಾಮ ಕಟ್ಟಿಮನಿ ಅವರೊಂದಿಗೆ ವಾಗ್ವಾದ ನಡೆಸಿದರು. ಇದಕ್ಕೆ “ವಸಂತ ಪಂಚಮಿ ಎನ್ನುವ ಕಾರಣಕ್ಕೆ ಆಚರಣೆ ನಡೆಸುತ್ತಿದ್ದಾರೆ, ಇದೆಲ್ಲ ನಮಗೆ ಕೇಳಬೇಡಿ” ಗ್ರಂಥಾಲಯ ಮುಖ್ಯಸ್ಥರು ಪ್ರತಿಕ್ರಿಯಿಸಿದರು.

Advertisements

ಈ ಕುರಿತು ಸಂಶೋಧನಾ ವಿದ್ಯಾರ್ಥಿ ನಂದಕುಮಾರ್‌ ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಬುದ್ದ, ಬಸವ ಅಂಬೇಡ್ಕರ್‌ ತತ್ವಸಿದ್ಧಾಂತ ಸೇರಿದಂತೆ ಸರ್ವಜನಾಂಗದ ಶಾಂತಿಯ ತೋಟದಲ್ಲಿ ನಂಬಿಕೆಯಿಟ್ಟು ಸಂವಿಧಾನವನ್ನು ಗೌರವಿಸುವ ನಮಗೆ ಅಂಬೇಡ್ಕರ್‌, ಬಸವಣ್ಣನವರ ಪೋಟೊಗೆ ಹೂವಿನ ಮಾಲೆ ಹಾಕಲು ಅನುಮತಿ ನೀಡದ ಇವರು ತಮ್ಮ ಇಚ್ಚೆಯಂತೆ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಆಚರಣೆಗಳು ಮಾಡುತ್ತಾರೆ” ಎಂದು ಆಕ್ಷೇಪಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎರಡು ವರ್ಷದ ಮಗಳ ಕೊಂದು, ತಾಯಿ ಆತ್ಮಹತ್ಯೆ

ಇದನ್ನು ವಿದ್ಯಾರ್ಥಿ ನಂದಕುಮಾರ್‌ ಅವರು ಫೇಸ್ಬುಕ್‌ ಸಾಮಾಜಿಕ ಜಾಲತಾಣದಲ್ಲಿ ಲೈವ್‌ ವಿಡಿಯೋ ಮಾಡಿದ್ದಾರೆ. ಇದಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X