ಕರ್ನಾಟಕ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫೆಬ್ರವರಿ 16ರಂದು ನಡೆಯಲಿದೆ. ಚುನಾವಣೆಯಲ್ಲಿ ಮತ ಚಲಾಯಿಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಲ್ಲ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಂಬಂಧ ಮಲ್ಲೇಶ್ವರಂನ ಐಪಿಪಿ ಸಭಾಂಗಣದಲ್ಲಿ ಅಂತಿಮ ಹಂತದ ಕ್ರಮಗಳ ಕುರಿತು ಸಭೆ ನಡೆಸಿದೆ.
ಕರ್ನಾಟಕ ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಮತದಾನದ ದಿನ (ಫೆ.16) ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಇರಲಿದೆ. ಕ್ಷೇತ್ರ ವ್ಯಾಪ್ತಿಯ ಅರ್ಹ ಶಿಕ್ಷಕ ಮತದಾರರಿಗೆ ಅಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆಯಲ್ಲಿ ಫೆ.16 ರ ಶುಕ್ರವಾರದಂದು ಉಪ ಚುನಾವಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ಫೆ.16 ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶಿಕ್ಷಕ ಮತದಾರರು ಉಪ ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ವಿಶೇಷ ಸಾಂದರ್ಭಿಕ ರಜೆಯನ್ನು ನಿಯಮಾನುಸಾರ ಮಂಜೂರು ಮಾಡುವಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಂಬಂಧಪಟ್ಟವರು ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ರಜೆಗೆ ಅನುಮತಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಮಾಡಿದ್ದರು.
ಈ ಸುದ್ದಿ ಓದಿದ್ದೀರಾ? ಫ್ರಾಂಚೈಸಿ ನೀಡುವುದಾಗಿ ವಂಚಸಿದ ಇಡ್ಲಿ ಗುರು ಹೋಟೆಲ್ ಮಾಲೀಕ; ಬಂಧನ
ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 14,432 ಮತದಾರಾರು ಇದ್ದಾರೆ. ಫೆಬ್ರವರಿ 16ರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಒಟ್ಟು 45 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮತಗಟ್ಟೆಗಳ ಬಳಿ 144 ಸೆಕ್ಷನ್ ಇರಲಿದೆ. ಇನ್ನು ಫೆಬ್ರವರಿ 20 ರಂದು ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತದಾನದ ಮೇಲ್ವಿಚಾರಣೆಗೆ ಎಫ್‌ಎಸ್‌ಟಿ, ಎಸ್‌ಎಸ್‌ಟಿ ಟೀಂ ರಚನೆ ಮಾಡಲಾಗಿದೆ.
ಮತಗಟ್ಟೆಗಳ ಬಳಿ 144 ಸೆಕ್ಷನ್ ಜಾರಿಯಿರಲಿದ್ದು, ಮತಗಟ್ಟೆಯ 100 ಮೀಟರ್ ಅಂತರದಲ್ಲಿ 5 ಜನಕ್ಕಿಂತ ಹೆಚ್ಚುಮಂದಿ ಸೇರುವಂತಿಲ್ಲ. ಜೊತೆಗೆ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ಮಾಡುವಂತಿಲ್ಲ.
43 ಮತಗಟ್ಟೆಗಳಲ್ಲಿ ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ 43 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರವು ಸರ್ಕಾರಿ ಕಲಾ ಕಾಲೇಜು, ನೃಪತುಂಗ ರಸ್ತೆ, ಅಂಬೇಡ್ಕರ್ ವೀಧಿ, ಕೆ.ಆರ್ ವೃತ್ತ, ಸಂಪಂಗಿರಾಮನಗರದಲ್ಲಿ ಸ್ಥಾಪಿಸಲಿದ್ದು, 20ನೇ ಫೆಬ್ರವರಿ 2024ರಂದು ಮತ ಎಣಿಕೆ ನಡೆಯಲಿದೆ.
ಮತದಾನದ ದಿನ ಫೆ.16 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಫೆ.20 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.