ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಕಾವೇರಿ ನೀರಿನ ಸಮಸ್ಯೆ ಎದುರಾದರೇ, ಇನ್ನೊಂದೆಡೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಮಯ ನಿಗದಿ ಮಾಡಲಾಗಿದೆ.
ಅಕಾಲಿಕ ಮಳೆ, ಅಂತರ್ಜಲ ಮಟ್ಟ ಕುಸಿತ ಸೇರಿದಂತೆ ನಾನಾ ಕಾರಣಗಳಿಂದ ಬೆಂಗಳೂರಿನಲ್ಲಿ ಫೆಬ್ರುವರಿಯಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ನೀರಿನ ಅಭಾವ ಇರುವ ಕಾರಣ ಬೆಂಗಳೂರಿನ ಬಹುತೇಕ ಪ್ರದೇಶದ ಶುದ್ದ ಕುಡಿಯುವ ನೀರಿನ ಘಟಕಗಳಿಗೆ ಸಮಯ ನಿಗದಿ ಮಾಡಲಾಗಿದೆ.
ಶುದ್ಧ ಕುಡಿಯುವ ನೀರಿನ ಘಟಕಗಳ ಮುಂದೆ ಬೋರ್ಡ್‌ಗಳನ್ನು ಅಳವಡಿಸಿ ನೀರಿನ ಸಮಸ್ಯೆಯ ಬಗ್ಗೆ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ ಮಹಿಳೆಯ ಮಾಂಗಲ್ಯ ಸರ ಕಳ್ಳತನ
ನೀರಿನ ಅಭಾವ ಇರುವುದರಿಂದ ಪ್ರತಿದಿನ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಮುಚ್ಚಲಾಗುತ್ತದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆ ಮತ್ತು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ನೀರಿನ ಲಭ್ಯತೆ ಇದೆ. ಸಾರ್ವಜನಿಕರು ಸಹಕರಿಸಬೇಕು ಎಂಬ ಬೋರ್ಡ್ ಅಳವಡಿಸಲಾಗಿದೆ.