ವಚನ ಮಂಟಪ, ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಿಯಾಂಕ್ ಖರ್ಗೆ ಮನವಿ; ಸಿದ್ದರಾಮಯ್ಯಗೆ ಪತ್ರ

Date:

Advertisements

ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಮತ್ತು ‘ವಚನ ವಿಶ್ವವಿದ್ಯಾಲಯ’ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಗಳಿಸಿ, ಭಾರತ ದೇಶದ ಆರ್ಥಿಕ ಯಂತ್ರವಾಗಿ ಕಾರ್ಯ ನಿರ್ವಹಿಸುತ್ತಾ ಒಂದು ಅಮೋಘ ರಾಜ್ಯವಾಗಿ ರೂಪುಗೊಳ್ಳಲು ನಮ್ಮ ನಾಡಿನ ತಾತ್ವಿಕ ಅಡಿಪಾಯವೇ ಕಾರಣ. ಈ ತತ್ವಗಳ ಆಶಯವನ್ನು ಜಗತ್ತಿಗೆ ತಿಳಿಸಲು ಇರುವ ಭಾಷೆಯ ಅಂತರಕ್ಕೆ ಸೇತುವೆ ಕಟ್ಟುವ ಮಹತ್ತರವಾದ ಕೆಲಸ ಮಾಡುವ ನಿಟ್ಟಿನಲ್ಲಿ ‘ವಚನ ಮಂಟಪ’ ಮತ್ತು ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಅಗತ್ಯವಿದೆ ಎಂದು ಪತ್ರದಲ್ಲಿ ಸಚಿವರು ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?

Advertisements

ವಚನ ಮಂಟಪ: ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ಅಥವಾ ಶರಣ ಸಾಹಿತ್ಯದ ಕೇಂದ್ರ ಬಿಂದುವಾಗಿದ್ದ ಕಲಬುರಗಿಯಲ್ಲಿ ಜಗಜ್ಯೋತಿ ಗುರು ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳ ಮಾಚಿದೇವ, ದೇವರ ದಾಸಿಮ್ಮಯ್ಯ, ಅಂಬಿಗರ ಚೌಡಯ್ಯ, ಡೋಹರ ಕಕ್ಕಯ್ಯ, ಸರ್ವಜ್ಞರಂತಹ ನಾಡಿನ ಮೇರು ಶರಣ ಸಾಹಿತಿಗಳ ಬದುಕು ಹಾಗೂ ಅವರಿಂದ ರಚಿತವಾದ ವಚನಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಿ ಅರಿವು ಮೂಡಿಸುವ ಕೇಂದ್ರವಾಗಿ, ವಚನ ಸಂಗ್ರಹಾಲಯವಾಗಿ “ವಚನ ಮಂಟಪ”ವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಇದಕ್ಕಾಗಿ 20 ಎಕರೆ ಜಾಗವನ್ನು ಮೀಸಲಿಡಬೇಕು ಎಂದು ಕೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ವಚನ ವಿಶ್ವವಿದ್ಯಾಲಯ: ನಾಡಿನಲ್ಲಿ ಸಮಾನತೆಯ ಯೋಚನಾ ಲಹರಿಯನ್ನು ಬಲವಾಗಿ ಪ್ರತಿಪಾದಿಸಿದ, ಕನ್ನಡ ನಾಡಿನಲ್ಲಿ ಸಾಮಾಜಿಕ ನ್ಯಾಯ ಹಾಗೂ ಜನರಲ್ಲಿ ಪ್ರಜ್ಞಾವಂತ ಮನೋಭಾವವನ್ನು ಮೂಡಿಸಿದ ನೆಲಮೂಲದ ಬಸವವಾದಿ ಶರಣರ ತತ್ವಗಳನ್ನು ಸೇರಿದಂತೆ ಪ್ರಗತಿಪರ ಕರ್ನಾಟಕಕ್ಕೆ ರಹದಾರಿಯಾಗಿರುವ ಎಲ್ಲಾ ತತ್ವಗಳ ಅಧ್ಯಯನಕ್ಕಾಗಿ ಹಾಗೂ ಜಗತ್ತಿನ ಅತೀದೊಡ್ಡ ಪ್ರಜಾಪ್ರಭುತ್ವ ದೇಶದ ಸಂವಿಧಾನದಲ್ಲಿ ಅಡಗಿರುವ ಈ ತತ್ವಗಳ ಬಗ್ಗೆ ಸಾರ್ವಕಾಲಿಕವಾಗಿ ಅರಿವು ಮೂಡಿಸುವ ಮೂಲಕ ಗುರು ಬಸವಣ್ಣನವರ ಜ್ಞಾನದ ಜ್ಯೋತಿಯ ಪ್ರಕಾಶವನ್ನು ಇಡೀ ಜಗತ್ತಿಗೆ ಪ್ರಜ್ವಲಿಸುವಂತೆ ಮೂಡುವ ಸಲುವಾಗಿ ರಾಜ್ಯದಲ್ಲಿ ಒಂದು ಕೇಂದ್ರೀಕೃತ ‘ವಚನ ವಿಶ್ವವಿದ್ಯಾಲಯ’ವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಎರಡೂ ಕೋರಿಕೆಗಳು ಕೇವಲ ನನ್ನದಲ್ಲ ಬಸವಣ್ಣನವರನ್ನು ಪ್ರತಿಪಾದಿಸುವ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ವಾಸಿಸುವ ಪ್ರತಿಯೊಬ್ಬರ ಬಯಕೆಯೂ ಆಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X