ರೈತ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಹಲವು ರೈತ ಸಂಘಟನೆಗಳು ಇಂದು ‘ಭಾರತ್ ಬಂದ್’ಗೆ ಕರೆ ನೀಡಿವೆ.ಈ ನಡುವೆ ದೊಡ್ಡ ಸಭೆಗಳನ್ನು ದೆಹಲಿ ಹಾಗೂ ಎನ್ಸಿಆರ್ ಭಾಗದಲ್ಲಿ ಮಾರ್ಚ್ 12ರವರೆಗೆ ಪ್ರತಿಬಂಧಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ರೈತರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದು, ನೋಯ್ಡಾ ಮೂಲದ ಭಾರತೀಯ ಕಿಸಾನ್ ಪರಿಷತ್ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಬಲ ನೀಡುತ್ತಿದೆ.
ಗುರುವಾರ(ಫೆ.16) ಸಂಜೆ ರೈತ ಸಂಘಟನೆಗಳ ನಾಯಕರು ಹಾಗೂ ಕೇಂದ್ರ ಸಚಿವರೊಂದಿಗೆ ನಡೆದ ಮಾತುಕತೆಗಳು ಫಲಪ್ರದವಾಗಿಲ್ಲ. ಮತ್ತೊಂದು ಸುತ್ತಿನ ಮಾತುಕತೆ ಭಾನುವಾರ(ಫೆ.18) ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ
ಭಾರತ್ ಬಂದ್ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಶುರುವಾಗಿದ್ದು, ಸಂಜೆ 4 ಗಂಟೆಯವರೆಗೆ ಇರಲಿದೆ.ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದ ಪ್ರಮುಖ ಹೆದ್ದಾರಿಗಳಲ್ಲಿ ರಸ್ತೆತಡೆ ನಡೆಸಲು ಪ್ರತಿಭಟನಾನಿರತ ರೈತರು ನಿರ್ಧರಿಸಿದ್ದಾರೆ.
ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಮಾತನಾಡಿ, ಪಂಜಾಬ್ ಹಾಗೂ ಹರಿಯಾಣ ಗಡಿಗಳಲ್ಲಿ ರೈತರನ್ನು ಪ್ರಚೋದಿಸಲು ದೆಹಲಿಯಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ನಾವು ಪಾಕಿಸ್ತಾನದವರಲ್ಲ. ರೈತರು ಪರಿಹಾರದ ಭರವಸೆಯನ್ನು ಹೊಂದಿದ್ದಾರೆ. ಅವರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ದೆಹಲಿಗೆ ಹೋಗಲು ಯೋಜಿಸುತ್ತಿದ್ದಾರೆ ಎಂದು ಹೇಳಿದರು.
ಈ ನಡುವೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರತಿಭಟನಾನಿರತ ರೈತರೊಂದಿಗೆ ಒಗ್ಗಟ್ಟು ಪ್ರದರ್ಧಿಸಿದ್ದು, ಹರಿಯಾಣದ ಗಡಿಗಳಲ್ಲಿ ಅಶ್ರುವಾಯು ಸಿಡಿತ, ಇಂಟರ್ನೆಟ್ ಸೇವೆಗಳನ್ನು ಬಂದ್ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.