ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೇ ಸ್ಪರ್ದಿಸುತ್ತೇನೆ. ಬೇರೆ ಕ್ಷೇತ್ರಗಳಿಗೆ ನಾನು ಹೋಗುವುದಿಲ್ಲ. ಅಂತಹ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ನಾನು ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇನೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ನಾನು ಇದೇ ಕ್ಷೇತ್ರದಲ್ಲಿಯೇ ಮತ್ತೆ ಸ್ಪರ್ಧಿಸುತ್ತೇನೆ. ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಮಾತೇ ಇಲ್ಲ. ಒಂದು ವೇಳೆ, ಪಕ್ಷ ಬದಲಾವಣೆ ಬಯಸಿದರೆ, ಅದಕ್ಕೂ ಬದ್ಧಳಾಗಿರುತ್ತೇನೆ” ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕರಂದ್ಲಾಜೆ, “ಸಿದ್ದರಾಮಯ್ಯ ಅವರ 15ನೇ ಬಜೆಟ್ ಫ್ಲಾಪ್ ಆಗಬಹುದು. ಸರ್ಕಾರದ ಬಳಿ ಹಣವಿಲ್ಲ. ಗ್ಯಾರಂಟಿಗಳಿಗಾಗಿ ಖಜಾನೆ ಖಾಲಿಯಾಗಿದೆ. ಸರ್ಕಾರಿ ನೌಕರರ ಸಂಬಳ ವಿಳಂಬವಾಗುತ್ತಿದೆ” ಎಂದು ಹೇಳಿದ್ದಾರೆ.