ರಾಜ್ಯ ಬಜೆಟ್ 2024-25 | ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: 75,938 ಸ್ಮಾರ್ಟ್ ಫೋನ್

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲು ನಿರ್ಧರಿಸಿದೆ.

“ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು” ಎಂದು ಸಿಎಂ ಘೋಷಿಸಿದ್ದಾರೆ.

ಉಳಿದಂತೆ ಬಜೆಟ್‌ನ ಪ್ರಮುಖ ಘೋಷಣೆಗಳು ಹೀಗಿದೆ:

Advertisements
  • ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ
  • ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ.
  • ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುವಿಟಿ ಸವಲತ್ತು.
  • Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ. ಪ್ರೋತ್ಸಾಹಧನ
  • ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲ ತಾಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳ ಆಯೋಜನೆ
  • ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ
  • ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷ ಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಣೆ
  • ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ
  • 2024-25ನೇ ಸಾಲಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ.
  • ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಳ
  • ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಳ
  • ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲ ಮಾಜಿ ದೇವದಾಸಿಯರಿಗೆ ವಿಶೇಷ ಪ್ಯಾಕೇಜ್
  • ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ
  • 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.
  • ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X