ರಾಜ್ಯ ಬಜೆಟ್‌ 2024-25 | ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ʼವಡ್ಡರ್ಸೆʼ ಪ್ರಶಸ್ತಿ ಸ್ಥಾಪನೆ

Date:

Advertisements

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದು, ದಶಕಗಳ ಕನಸು ನನಸಾಗಿದೆ.

ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಘೋಷಿಸಿದರು.

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನದ ಮೈಲಿಗಲ್ಲು

Advertisements

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವು ಈ ವರ್ಷ ಶತಮಾನದ ಮೈಲಿಗಲ್ಲನ್ನು ಪೂರ್ಣಗೊಳಿಸುತ್ತಿದೆ. ಮಹಾತ್ಮ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿದೆ. ಈ ಅಧಿವೇಶನದ ಕೊಡುಗೆಯನ್ನು ಸ್ಮರಿಸಲು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಅಲ್ಲದೇ ಮಹಾತ್ಮಾ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮರಣಾರ್ಥ ಫಲಕಗಳನ್ನು ಅಳವಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

“ವಾರ್ತಾ ಇಲಾಖೆಯು ಪ್ರಕಟಿಸುತ್ತಿರುವ ವಾರ್ತಾ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸ ಪತ್ರಿಕೆಗಳನ್ನು ಡಿಜಿಟೈಸ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಕ್ರಮವಹಿಸಲಾಗುವುದು” ಎಂದರು.

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಸ್ಥಾಪನೆ

“ಸಾಮಾಜಿಕ ನ್ಯಾಯದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಪತ್ರಕರ್ತರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಪ್ರಶಸ್ತಿ ಸ್ಥಾಪಿಸಿ, ಪ್ರತಿ ವರ್ಷ ನೀಡಲಾಗುವುದು” ಎಂದು ಸಿದ್ದರಾಮಯ್ಯ ಘೋಷಿಸಿದರು.

ಶಿವಾನಂದ ತಗಡೂರು ಧನ್ಯವಾದ

ದಾವಣಗೆರೆಯಲ್ಲಿ ಫೆ. 3 ಮತ್ತು 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.

ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.

ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X