ಧಾರವಾಡ | ಸಂವಿಧಾನ ಶ್ರೇಷ್ಠತೆ ಎತ್ತಿಹಿಡಿದು, ಸಂವಿಧಾನದ ಆಶಯದಂತೆ ನಡೆಯುವುದು ನಮ್ಮ ಕರ್ತವ್ಯ; ಡಿಸಿ

Date:

Advertisements

ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ಅದರ ಶ್ರೇಷ್ಠತೆಯನ್ನು ಎತ್ತಿಹಿಡಿದು ಸಂವಿಧಾನದ ಆಶಯದಂತೆ ನಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಅವರು ಇಂದು (ಫೆ.16) ಜಿಲ್ಲಾಡಳಿತ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಸಂವಿಧಾನ ಜಾಗೃತಿ ಜಾಥಾ ನಿಮಿತ್ತ ಆಯೋಜಿಸಿದ್ದ ವಿಕಲಚೇತನರ ಬೈಕ್ ರ್ಯಾಲಿಗೆ ಚಾಲನೆ ನೀಡಿ, ಡಾ. ಬಿ.ಆರ್.ಅಂಬೇಡ್ಕರ ಪುತ್ಥಳಿ ಮುಂಭಾಗದಲ್ಲಿ ಸಾಮೂಹಿಕ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ನಮ್ಮ ಸಂವಿಧಾನದ ಪೀಠಿಕೆಯು ಸಂವಿಧಾನದ ತಿರುಳಾಗಿದೆ. ಪೀಠಿಕೆಯಲ್ಲಿ ಅಳವಡಿಸಿರುವ ಆಶಯಗಳನ್ನು ಭಾರತೀಯರಾದ ನಾವು ತಪ್ಪದೇ ಪಾಲಿಸಬೇಕು. ಭ್ರಾತೃತ್ವ, ಸಹಯೋದರತ್ವ ಸಾಮರಸ್ಯಗಳನ್ನು ಉಳಿಸಿ,  ಬೆಳೆಸಲು ಸಂವಿಧಾನ ಮಾರ್ಗಸೂಚಿಯಾಗಿದೆ ಎಂದು ಅವರು ಹೇಳಿದರು.

Advertisements

ಸಂವಿಧಾನ ರಚನೆಗೊಂಡು 75 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಈಡಿ ರಾಜ್ಯದಾದ್ಯಂತ ಹೆಮ್ಮೇಯಿಂದ ನಮ್ಮ ಸಂವಿಧಾನದ ಮಹತ್ವ ಸಾರಲು ಹಬ್ಬದ ರೀತಿಯಲ್ಲಿ ಜಾಗೃತಿ ಜಾಥಾ ಮಾಡಲಾಗುತ್ತಿದೆ.

ಧಾರವಾಡ ಜಿಲ್ಲೆಯಲ್ಲಿ ಜನವರಿ 26 ರಂದು ಆರಂಭಗೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಫೆ. 15 ರವರೆಗೆ ಜಿಲ್ಲೆಯ 106 ಗ್ರಾಮಗಳಲ್ಲಿ ಸಂಚರಿಸಿದೆ. ಗ್ರಾಮದ ನಾಗರಿಕರು, ಮಕ್ಕಳು, ಮಹಿಳೆಯರು ಕುಂಭ, ಆರತಿ, ಬೈಕ ರ್ಯಾಲಿ, ಕಾಲ್ನಡಿಗೆ ಜಾಥಾಗಳ ಮೂಲಕ ಸಂಭ್ರಮದಿಂದ ಸ್ತಬ್ಧಚಿತ್ರದ ಟ್ಯಾಬ್ಲೋವನ್ನು ಸ್ವಾಗತಿಸಿ ಹಬ್ಬದಂತೆ ಆಚರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಧೀಶ ಪಿ.ಎಫ್.ದೊಡ್ಡಮನಿ ಅವರು, ನೆರೆದ  ಸಾರ್ವಜನಿಕರಿಗೆ, ವಿಕಲಚೇತನರಿಗೆ ಸಂವಿಧಾನ ಪೀಠಿಕೆ ಬೋಧಿಸಿ ಮಾತನಾಡಿದ ಅವರು, ವಿಕಲಚೇತನರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಹಾಗೂ ಸಾಮಾಜಿಕವಾಗಿ, ಆರ್ಥಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸೀಗಲು ಭಾರತದ ಸಂವಿಧಾನವೇ ಕಾರಣವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಬದುಕಬೇಕು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಬಕಾಷ್ ಎಂ.ಎಸ್.ಅವರು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿ ಜಗದೀಶ.ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿವಿಧ ತಾಲೂಕುಗಳಿಂದ ಆಗಮಿಸಿದ್ದ ವಿಲಕಚೇತನರು ತಮ್ಮ ಬೈಕ್‍ಗಳ ಮೂಲಕ ಕೆಸಿಡಿ ಕಾಲೇಜು ಮೈದಾನದಿಂದ ಬೈಕ್ ರ್ಯಾಲಿ ಆರಂಭಿಸಿದರು. ಬೈಕ ರ್ಯಾಲಿಯು ಕಾಲೇಜು ರಸ್ತೆ ಮೂಲಕ ಆಲೂರು ವೆಂಕಟರಾವ ಸರ್ಕಲ್, ಹಳೆ ಬಸ್ ನಿಲ್ದಾಣದಿಂದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮೂಲಕ ಮುಕ್ತಾಯಗೊಂಡಿತು. ಬೈಕ್ ರ್ಯಾಲಿಯೊಂದಿಗೆ ಕೆಲಗೇರಿಯ ಜಗ್ಗಲಗಿ ಮೇಳ ಸಂಚರಿಸಿ, ಸಾರ್ವಜನಿಕರ ಗಮನ ಸೇಳೆಯಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X