ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್, ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಶಾಸಕ ರಾಜು ಆಲಗೂರ ಹೇಳಿದ್ದಾರೆ.
27ಸಾವಿರ ಕೋಟಿ ರೂ. ರಾಜ್ಯದ ರೈತರಿಗೆ ಸಾಲ ವಿತರಣೆಗಾಗಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸುಧಾರಣೆಗೆ ಹೆಚ್ಚು ಒತ್ತು, ಪ.ಜಾ, ಪ.ಪಂ ಜನಾಂಗದವರ ಅಭಿವೃದ್ಧಿಗೆ ನಿರೀಕ್ಷೆಗಿಂತಲೂ ಹೆಚ್ಚಿನ ಅನುದಾನ ಮೀಸಲು, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ, ಗ್ಯಾರಂಟಿ ಯೋಜನೆಗಳ ಸಂಪೂರ್ಣ ಅನುಷ್ಠಾನದೊಂದಿಗೆ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಡಲಾಗಿದೆ.
ವಿಜಯಪುರಕ್ಕೆ ತೋಟಗಾರಿಕೆ ವಿದ್ಯಾಲಯ ಮಂಜೂರು ಮಾಡಿರುವುದು ಹಾಗೂ ವಿಮಾನ ನಿಲ್ದಾಣಕ್ಕೆ 94ಕೋಟಿ ರೂ. ಹೆಚ್ಚುವರಿ ಹಣ ಮಂಜೂರು ಮಾಡಿದ್ದನ್ನು ಸ್ವಾಗತಿಸುತ್ತಾ ಒಟ್ಟಾರೆಯಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್, ರಾಜ್ಯದ ಮತ್ತು ಸರ್ವಜನರ ಕಲ್ಯಾಣವನ್ನು ಒಳಗೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ರಾಜು ಆಲಗೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.