ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ನಷ್ಟದ ಪರಿಹಾರ ನೀಡುವಲ್ಲಿ ಸರ್ಕಾರ ಹಾಗೂ ಇನ್ಷೂರೆನ್ಸ್ ಕಂಪನಿಯಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನರಸಣ್ಣ ನಾಯಕ ಆರೋಪಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, “ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ರೈತರ ಖಾತೆಗೆ ಹಣ ಜಮೆಯಾಗದೆ ಅನ್ಯ ವ್ಯಕ್ತಿಗಳ ಖಾತೆಗೆ ಹಣ ಜಮೆಯಾಗಿರುವ ಆರೋಪಗಳು ರೈತರಿಂದ ಕೇಳಿಬರುತ್ತಿವೆ” ಎಂದು ಹೇಳಿದರು.
“ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯು ರೈತರ ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ಮತ್ತು ಇನ್ಷೂರೆನ್ಸ್ ಕಂಪನಿಯು ಕೆಲವು ಮಧ್ಯವರ್ತಿಗಳ ಜತೆಗೆ ಶಾಮಿಲಾಗಿ ಯೋಜನೆಯನ್ನು ಸಂಪೂರ್ಣ ದುರ್ಬಳಕೆ ಮಾಡಿಕೊಂಡಿವೆ ಇದರಿಂದ ರೈತರಿಗೆ ಯಾವುದೆ ಪ್ರಯೋನವಾಗಿಲ್ಲ” ಎಂದು ದುರಿದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ
“ಈ ಬಗ್ಗೆ ಸರ್ಕಾರ ಉನ್ನತ ಮಟ್ಟದ ತನಿಖೆ ಮಾಡಿ ತಪ್ಪಿತಸ್ಥರಿಗೆ ಸೂಕ್ತ ಕ್ರಮ ಜರುಗಿಸಬೇಕು. ಅರ್ಹ ರೈತರಿಗೆ ಬೆಳೆ ನಷ್ಟದ ಪರಿಹಾರವನ್ನು ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.