ಚಾಮರಾಜನಗರ | ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮದ್ಯಾಹ್ನ 3ರ ಬಳಿಕ ಪ್ರವೇಶ ನಿಷೇಧ ಆದೇಶ ವಾಪಸ್

Date:

Advertisements

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆ ಬಳಿಕ ಪ್ರವೇಶವಿಲ್ಲವೆಂದು ತಾಲೂಕು ಆಡಳಿತ ಫೆಬ್ರವರಿ 15 ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ.

ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಮಧ್ಯಾಹ್ನ 3 ಗಂಟೆ ಬಳಿಕ ಪ್ರವೇಶವಿಲ್ಲವೆಂದು ಗುಂಡ್ಲುಪೇಟೆ ತಾಲೂಕು ತಹಶೀಲ್ದಾರ್‌ ಟಿ ರಮೇಶ್‌ ಬಾಬು ಅವರು ಫೆಬ್ರವರಿ 15ರಂದು ಆದೇಶ ಹೊರಡಿಸಿದ್ದರು. ಈ ಬಗ್ಗೆ ಭಾರೀ ಟೀಕೆ ಹಾಗೂ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಈ ಆದೇಶವನ್ನು ಹಿಂಪಡೆದಿದ್ದಾರೆ. ಈ ಮೂಲಕ ಹಿಂದಿನಂತೆ ಸಂಜೆ 4 ಗಂಟೆಯವರೆಗೆ ಹಿಮವದ್‌ ಗೋಪಾಲಸ್ವಾಮಿ ದರ್ಶನ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷಗಳಾದರೂ ಯಾವುದೇ ಭರವಸೆ ಈಡೇರಿಸಿಲ್ಲ: ಕಾಶಿನಾಥ ಬಂಡಿ

Advertisements

ವನ್ಯ ಜೀವಿಗಳಿಗೆ ತೊಂದರೆ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ 3 ಗಂಟೆ ಬಳಿಕ ಬಸ್ ನಿಷೇಧದ ಆದೇಶವನ್ನು ಹೊರಡಿಸಿದ್ದರು. ಆದರೆ ಭಕ್ತರು ಮತ್ತು ಪ್ರವಾಸಿಗರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇನ್ನು ಸಮೀಪದ ಕನ್ನೇಗಾಲ ಗ್ರಾಮಸ್ಥರು ಆದೇಶ ಹಿಂಪಡೆಯುವಂತೆ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಕುರಿತು ಮೇಲಧಿಕಾರಿಗಳ ಜತೆ ಚರ್ಚಿಸಿದ ತಹಶೀಲ್ದಾರ್‌ 4 ಗಂಟೆವರೆಗೆ ಬಸ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟು ಮೊನ್ನೆ ಹೊರಡಿಸಿದ್ದ ಹೊಸ ಆದೇಶವನ್ನು ಹಿಂಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X