ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಆರ್ಥಿಕ ಸಂಕಷ್ಟದಲ್ಲಿರುವ ರೈತರು ಮತ್ತು ಕಾರ್ಮಿಕರ ಸಾಲ ಮನ್ನಾ ಮಾಡಬೇಕು. ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೊಳಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ.
ಪ್ರತಿಭಟನೆಯಲ್ಲಿ ಸಿದಗೌಡ ಮೋದಗಿ, ಡಾ.ಜನಾರ್ದನ್, ಮಂದಾ ನೇವಗಿ, ನಾಗೇಶ ಸಾತೇರಿ, ಮಲ್ಲಿಕಾರ್ಜುನ ಡೊಂಗರಗಾವಿ, ಸಂಜು ಡೊಂಗರಗಾವಿ, ಶಿವಲೀಲಾ ಮಿಸಾಳೆ, ಗೀತಾ ಧರೆಣ್ಣವರ ಇದ್ದರು.