ಉಡುಪಿ | ಐದು ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಬಜೆಟ್; ರೈತರು, ಅಸಂಘಟಿತ ಕಾರ್ಮಿಕರ ನಿರ್ಲಕ್ಷ್ಯ 

Date:

Advertisements

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅವರ 15ನೇ ಹಾಗೂ 2024-25ರ ಸಾಲಿಗೆ 1.05 ಲಕ್ಷ ಕೋಟಿ ಸಾಲದ ಹೊರೆಯನ್ನೊತ್ತ 3.71 ಲಕ್ಷ ಕೋಟಿರೂಗಳ ಬಜೆಟ್‌ನಲ್ಲಿ 5 ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಕ್ರಮವನ್ನು ಸಿಪಿಐ(ಎಂ) ಸ್ವಾಗತಿಸುತ್ತದೆ ಎಂದು ಸಿಪಿಐಎಂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದರು.

ಉಡುಪಿಯಲ್ಲಿ ಪತ್ರಿಕಾ ಪ್ರಕಟಣೆ ತಿಳಿಸಿರುವ ಅವರು, “ಅಸಂಘಟಿತ ಕಾರ್ಮಿಕರುಗಳಾದ ಆಟೊ, ಬಸ್, ಲಾರಿ ಚಾಲಕರು ಮತ್ತು ಇತರ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಮೂಲಕ ಸವಲತ್ತುಗಳನ್ನು ಒದಗಿಸಲು ಹೆಚ್ಚಿನ ಪ್ರಮಾಣದ ಕ್ರಮ ಕೈಗೊಂಡಿಲ್ಲ. ಅಂಗನವಾಡಿ, ಆಶಾ, ಬಿಸಿಯೂಟ, ಹಾಸ್ಟೆಲ್, ಸಂಜೀವಿನಿ ನೌಕರರಿಗೆ, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತರಿಯಲ್ಲಿ ಕೆಲಸ ಮಾಡುವವರಿಗೆ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಮಾಡಬೇಕಾಗಿತ್ತು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಬರಗಾಲದಲ್ಲಿ ಬೇಯುತ್ತಿರುವ ಕೃಷಿಕರಿಗೆ, ಕೇಂದ್ರ ಒಕ್ಕೂಟ ಸರ್ಕಾರದ ಅಸಹಕಾರ ಮತ್ತು ತಾರತಮ್ಯ ನೀತಿಯ ನಡುವೆಯೂ ತಲಾ ₹2‌,000 ಪರಿಹಾರ, ಸಾಲದ ಬಡ್ಡಿ ಹಾಗೂ ಸುಸ್ತಿ ಬಡ್ಡಿ ಮನ್ನಾ, ಸಹಕಾರ ರಂಗದಲ್ಲಿ ಹೆಚ್ಚುವರಿ ಸಾಲ ನೀಡಲು, ಎಪಿಎಂಸಿಗಳ ಪುನರುಜ್ಜೀವನಗೊಳಿಸಲು ಕ್ರಮ, ಹಾಲು ಹಾಗೂ ರೇಷ್ಮೆ ಉತ್ಪಾದಕರಿಗೆ ಸಹಾಯಧನದ ಹೆಚ್ಚಳ, ದೇವದಾಸಿ ಮಹಿಳೆಯರು, ಮಂಗಳ ಮುಖಿಯರ ಮಾಸಿಕ ಸಹಾಯಧನದ ಹೆಚ್ಚಳ, ಅಂಗನವಾಡಿ ನೌಕರರಿಗೆ ಗ್ರಾಚ್ಯೂಟಿ ಮತ್ತು ಸ್ಮಾರ್ಟ್ ಪೋನ್ ಮುಂತಾದ ಘೋಷಣೆಯನ್ನು ಸ್ವಾಗತಿಸುತ್ತೇವೆ” ಎಂದರು.

Advertisements

“ಕೇಂದ್ರದ ಒಕ್ಕೂಟ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎರಡೂ ಸೇರಿ, ಮುಂದಿನ ದಿನಗಳಲ್ಲಿ ಬಡ ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿ ಕ್ರಮವಹಿಸಬೇಕಿದೆ. ಕೃಷಿ ಉತ್ಪನ್ನಗಳ ಬೆಲೆಗಳ ಏರಿಳಿತ ಮಾಡುವ ಮಾರುಕಟ್ಟೆ ಶಕ್ತಿಗಳಿಂದ, ಬರ ಹಾಗೂ ಅತಿವೃಷ್ಟಿ, ಕಳಪೆ ಬೀಜ, ಕ್ರಿಮಿನಾಶಕಗಳಿಂದಾಗುವ ನಷ್ಟದಿಂದ ರೈತರನ್ನು ರಕ್ಷಿಸಲು ಕೇರಳ ಮಾದರಿಯ ಋಣಮುಕ್ತ ಕಾಯ್ದೆಗೆ ಕ್ರಮವಹಿಸಬೇಕು” ಎಂದು ಎರಡೂ ಸರ್ಕಾರಗಳನ್ನು ಒತ್ತಾಯಿಸಿದರು.

“ರಾಜ್ಯ ಹಾಗೂ ಒಕ್ಕೂಟ ಸರ್ಕಾರಗಳು ರಾಜ್ಯವನ್ನು ಆರ್ಥಿಕ ಸಂಕಷ್ಟ ಹಾಗೂ ಬಿಕ್ಕಟ್ಟಿನಿಂದ ಪಾರು ಮಾಡಲು, ಇದಕ್ಕೆ ಕಾರಣವಾದ ಜಾಗತಿಕರಣ ಹಾಗೂ ಉದಾರಿಕರಣ, ಖಾಸಗೀಕರಣದ ನೀತಿಗಳಿಂದ ಹೊರಬರಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಗದಗ | ಕಾಯಕ ದಾಸೋಹದ ಆರ್ಥಿಕ ನೀತಿಯನ್ನು ಭೋಧಿಸಿದ್ದು ಬಸವಣ್ಣ: ಸಚಿವ ಎಚ್.ಕೆ ಪಾಟೀಲ್

“ಒಕ್ಕೂಟ ಸರ್ಕಾರದ ವಿದ್ಯುತ್ ತಿದ್ದುಪಡಿ ಮಸೂದೆಯು ದೇಶದ ಮತ್ತು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದ್ದು‌, ಅದನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲವೆಂದು ಬಜೆಟ್‌ನಲ್ಲಿ ಪ್ರಕಟಿಸಬೇಕೆಂದು ರಾಜ್ಯದ ಜನತೆ ಒತ್ತಾಯಿಸುತ್ತಿದ್ದರೂ ಜಾರಿಗೊಳಿಸಿಲ್ಲ” ಎಂದರು.

“ಐದು ಲಕ್ಷ ಕಾರ್ಮಿಕ ಕುಟುಂಬಗಳು ಜೀವನೋಪಾಯ ಮಾಡುತ್ತಿರುವ ಸುಮಾರು 80,000 ಸಣ್ಣ ಹಾಗೂ ಅತಿಸಣ್ಣ ಕೈಗಾರಿಕೆಗಳ ನಾಶವನ್ನು ತಡೆಯುವಂತೆ ಸಿಪಿಐ(ಎಂ) ರಾಜ್ಯದ ಮುಖ್ಯಮಂತ್ರಿಗಳನ್ನು ಬಲವಾಗಿ ಒತ್ತಾಯಿಸಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X