ಕಟೀಲ್, ಕರಂದ್ಲಾಜೆ ಅವರೇ, ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದ್ದೀರಾ?: ಉತ್ತರಿಸಲು ಸಿದ್ದರಾಮಯ್ಯ ಕರೆ

Date:

Advertisements

ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ” ಎಂದು ಪ್ರಶ್ನಿಸಿದರು.

“ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ? ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು?” ಎಂದು ಕೇಳಿದರು.

Advertisements

“ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಸಿದ್ದರಾಮಯ್ಯ ಅವರು ಜನಸ್ತೋಮದ ಎದುರು ಪ್ರಶ್ನಿಸಿದರು.

“ದಕ್ಷಿಣಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಕಾರ್ಯಕರ್ತರ ಸಮಾವೇಶ | ಕರಾವಳಿ ಭಾಗದಲ್ಲಿ ಪಕ್ಷದ ಅಸ್ತಿತ್ವಕ್ಕೆ ರಣ ಕಹಳೆ ಮೊಳಗಿಸಿದ ಕಾಂಗ್ರೆಸ್‌

“ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ? ಹೇಳಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮುಖ್ಯಮಂತ್ರಿಗಳು ಕೇಳಿದರು. ಜನರು ಇಲ್ಲ, ಇಲ್ಲ, ಏನಿಲ್ಲ ಎಂದು ಕೂಗಿದರು.

“2013-18 ರ ವರೆಗೂ ನಾವು ಕೊಟ್ಟ ಭರವಸೆಗಳಲ್ಲಿ ಶೇ98 ರಷ್ಟನ್ನು ಈಡೇರಿಸಿದೆವು. ಈ ಬಾರಿ ಚುನಾವಣೆ ವೇಳೆ 5 ಗ್ಯಾರಂಟಿಗಳ ಜತೆಗೆ ಹಲವು ಭರವಸೆ ನೀಡಿದ್ದೆವು. ಕೇವಲ 8 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಕೊಟ್ಟಿದ್ದೇವೆ. ನಾವು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದೆವು” ಎಂದರು.

“ನಮ್ಮ ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದ 155 ಕೋಟಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದರು. ಬಿಜೆಪಿ ತನ್ನ ಇತಿಹಾಸದಲ್ಲಾಗಲೀ, ವರ್ತಮಾನದಲ್ಲಾಗಲೀ ಇಷ್ಟೊಂದು ಜನೋಪಯೋಗಿ ಕೆಲಸ ಮಾಡಿದ್ದರೆ ಒಂದೇ ಒಂದು ಉದಾಹರಣೆ ಕೊಡಿ” ಎಂದು ಮುಖ್ಯಮಂತ್ರಿಗಳು ಜನರಿಗೆ ಕೇಳಿದರು. ಜನರು ಇಲ್ಲಾ ಇಲ್ಲಾ ಏನಿಲ್ಲ, ಯಾವುದೂ ಇಲ್ಲ ಎಂದು ಕೂಗಿದರು.

“ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು ಈಗ “ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ” ಎಂದು ಭಜನೆ ಆರಂಭಿಸಿದ್ದಾರೆ” ಎಂದು ಸಿಎಂ ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X