ಮಂಡ್ಯ | ಅಮುಲ್‌ ಹೇರಿಕೆ ವಿರೋಧಿಸಿ ರೈತಸಂಘ ಪ್ರತಿಭಟನೆ

Date:

Advertisements
  • ರಾಜ್ಯಪಾಲರಿಗೆ ಪತ್ರ ಬರೆದು ಆಕ್ರೋಶ
  • ಕೂಡಲೇ ಮಧ್ಯ ಪ್ರವೇಶಿಸುವಂತೆ ಮನವಿ

ಕರ್ನಾಟಕ ರಾಜ್ಯದ ಕೆಎಂಎಫ್‌ ನಂದಿನಿ ಹಾಲಿನ ಉತ್ಪನ್ನಗಳನ್ನು ದೂರ ಮಾಡಲು ಗುಜರಾತ್ ಮೂಲದ ಅಮುಲ್ ಉತ್ಪನಗಳನ್ನು ಮುಕ್ತ ಮಾರುಕಟ್ಟೆಗೆ ರಾಜ್ಯದಲ್ಲಿ ಅವಕಾಶ ನೀಡಿರುವ ಬಿಜೆಪಿ ಸರ್ಕಾರದ ಹುನ್ನಾರವನ್ನು ಖಂಡಿಸಿ ‘ನಂದಿನಿ ಉಳಿಸಿ’ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಪತ್ರ ರವಾನಿಸಿದರು.

“ಸಹಕಾರಿ ಕ್ಷೇತ್ರದಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದು, ನಂದಿನಿ ಬ್ರಾಂಡ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ವಾಸಿಯಾಗಿದೆ. ರಾಜ್ಯದ ರೈತಾಪಿ ಅದರಲ್ಲೂ ಸಣ್ಣ, ಅತಿ ಸಣ್ಣ ಹಾಗೂ ಕೃಷಿ ಕಾರ್ಮಿಕರು ಹೈನುಗಾರಿಕೆಯನ್ನು ಅವಲಂಭಿಸಿ ಜೀವನವನ್ನು ಕಟ್ಟಿಕೊಳ್ಳುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ವಿವರಿಸಿದ್ದಾರೆ.

“ಹೈನುಗಾರಿಕೆ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದ ಮಾರುಕಟ್ಟೆಗೆ ತಂದು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಾಶ ಮಾಡಲು ಹೊರಟಿದೆ” ಎಂದು ಕಿಡಿಕಾರಿದರು.

Advertisements

ಈ ಸುದ್ದಿ ಓದಿದ್ದೀರಾ? ಮಂಡ್ಯ | ಪ್ರಮುಖರ ಸಭೆ ಕರೆದು ಬೆಂಬಲ ಕೋರಿದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮಧುಚಂದನ್

“ಸರ್ಕಾರದ ಈ ನಿರ್ಧಾರವು ರಾಜ್ಯದ ರೈತರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಒತ್ತು ನೀಡಿ, ರಾಜ್ಯದ ಹಿತಾಶಕ್ತಿಯನ್ನು ಕಾಪಾಡಿಕೊಳ್ಳಲು ಒತ್ತಾಯಿಸಿ, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯದ ಹೈನುಗಾರಿಕೆಯನ್ನು ಉಳಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಮುಖಂಡರಾದ ನೇತ್ರಾವತಿ, ಹೊಸೂರು ಕುಮಾರ್, ಹೊಸಕೋಟೆ ಬಸವರಾಜು ಹಾಗೂ ಎಲ್ಲ ತಾಲೂಕಿನ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X