ಬೀದರ್‌ | ಫೆ. 27 ಮತ್ತು 28 ರಂದು ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Date:

Advertisements

ಬೀದರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.

“ಈ ಹಿಂದೆ ಫೆ.3 ಮತ್ತು 4 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು, ಆದರೆ ಸಮಯದ ಅಭಾವ ಹಾಗೂ ಕನ್ನಡ ಭವನದ ಉದ್ಘಾಟನೆಯ ಹಿನ್ನೆಲೆಯಲ್ಲಿ ದಿನಾಂಕವನ್ನು ಮುಂದೂಡಲಾಗಿತ್ತು. ಈ ಹಿಂದೆ ಹಲವು ಸುತ್ತಿನ ಸಭೆಗಳನ್ನು ನಡೆಸಿ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆ, ಕಾರ್ಯಾಧ್ಯಕ್ಷರನ್ನಾಗಿ ಗುರುನಾಥ ಕೊಳ್ಳೂರು ಹಾಗೂ ಕೋಶಾಧ್ಯಕ್ಷರನ್ನಾಗಿ ಬಾಬು ವಾಲಿ ಅವರನ್ನು ಆಯ್ಕೆ ಮಾಡಲಾಗಿದ್ದು, ವಿವಿಧ ಉಪಸಮಿತಿಗಳನ್ನು ಸಹ ರಚಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

21ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಈಗಾಗಲೇ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರನ್ನು ಆಯ್ಕೆ ಮಾಡಲಾಗಿದ್ದು, ಸಮ್ಮೇಳನದ ಸವಿನೆನಪಿಗಾಗಿ “ಸಾಂಸ್ಕೃತಿಕ ನಾಯಕ” ಎನ್ನುವ ಸ್ಮರಣಸಂಚಿಕೆಯನ್ನೂ ಸಹ ಹೊರತರಲಾಗುತ್ತಿದ್ದು, ಸ್ಮರಣ ಸಂಚಿಕೆಯ ಸಂಪಾದಕರನ್ನಾಗಿ ಡಾ.ಬಸವರಾಜ ಬಲ್ಲೂರ ಅವರು ಈಗಾಗಲೇ ಸಂಚಿಕೆಯ ಸಿದ್ದತೆಯಲ್ಲಿದ್ದಾರೆ. ಆಸಕ್ತರು ತಮ್ಮ ಲೇಖನಗಳನ್ನು ಡಾ.ಬಸವರಾಜ ಬಲ್ಲೂರ ಅವರಿಗೆ ಕಳುಹಿಸಲು ಕೋರಿದ್ದಾರೆ.

Advertisements

ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ : 

ಎರಡು ದಿನಗಳ ಸಮ್ಮೇಳನದಲ್ಲಿ ಭಾಗವಹಿಸುವ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ವಿಶೇಷ ಸಾಂದರ್ಭಿಕ ರಜೆಗಳನ್ನು ನೀಡಲು ಆಯಾ ಇಲಾಖೆಯ ಮುಖ್ಯಸ್ಥರು ಕ್ರಮ ಕೈಗೊಂಡಿದ್ದು, ಶಿಕ್ಷಕರು ಹಾಗೂ ಉಪನ್ಯಾಸಕರು ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳನದಲ್ಲಿ ಜರುಗುವ ಉಪನ್ಯಾಸಗಳ ಪ್ರಯೋಜನ ಪಡೆಯಲು ಕೋರಲಾಗಿದೆ.
ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಮೆರವಣಿಗೆಯು ಬೀದರ್ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯಲಿದ್ದು, ಆಯ್ದ ಶಾಲೆಗಳ ಮಕ್ಕಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾಹಿತಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ಜಿಲ್ಲೆಯ ವಿವಿಧ ಲೇಖಕರು ತಮ್ಮ ಪುಸ್ತಕಗಳನ್ನು ಬಿಡುಗಡೆ ಮಾಡಲು ಇಚ್ಛಿಸಿದ್ದು, ಆಸಕ್ತ ಲೇಖಕರು ತಮ್ಮ ಕೃತಿಗಳನ್ನು ಕಸಾಪ ಕೋಶಾಧ್ಯಕ್ಷರಾದ ಶಿವಶಂಕರ ಟೋಕರೆ ಅವರಿಗೆ ತಲುಪಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X