ವಿದ್ಯಾರ್ಥಿಗಳು ಕಾಲಹರಣ ಮಾಡದೆ ಶ್ರದ್ಧೆಯಿಂದ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರ ನೀಡಿದ ಲ್ಯಾಪ್‍ಟಾಪ್‍ಗಳನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟಿಲ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ(ಫೆ.17) ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಿಸಿ ಮಾತನಾಡದರು.
ಇಲಾಖೆಯಿಂದ 140 ಮಕ್ಕಳಿಗೆ ಲ್ಯಾಪ್‌ಟಾಪ್ ಮಂಜೂರಾಗಿದ್ದು, ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 22 ಲ್ಯಾಪ್‌ಟಾಪ್ ವಿತರಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿಗಾಗಿ ನಾನಾ ಗ್ರಾಮಗಳಲ್ಲಿ ಹಾಹಾಕಾರ
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ, ಗಣ್ಯರುಗಳಾದ ಜಿ ಎಸ್ ಗಡ್ಡದೇವರಮಠ, ಸಿದ್ದು ಪಾಟಿಲ್, ಪ್ರೊ ಕೆ ಎಚ್ ಬೇಲೂರ, ಎಸ್ ಎನ್ ಬಳ್ಳಾರಿ, ಬಸವರಾಜ ಕಡೆಮನಿ, ಪ್ರಭು ಬುರಬುರೆ, ಕಾರ್ಮಿಕ ಇಲಾಖೆಯ ಅಧಿಕಾರಿ ಬಿ ಆರ್ ಜಾಧವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಯವರು ಇದ್ದರು.