ಕಲಬುರಗಿ | ಪ್ರತಿಯೊಬ್ಬ ಪ್ರಜೆ ಸ್ವತಂತ್ರವಾಗಿ ಜೀವಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ; ಶಾಸಕ ಅಜಯ ಸಿಂಗ್

Date:

Advertisements

ನಮ್ಮ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನ. ಈ ದೇಶದ ಪ್ರತಿಯೊಬ್ಬ ಪ್ರಜೆಯು ಸ್ವತಂತ್ರವಾಗಿ ಜೀವಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ.  ಈ ದೇಶದ ರಕ್ಷಾಕವಚ ಸಂವಿಧಾನ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಅಜಯ ಸಿಂಗ್ ಹೇಳಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನದಿಂದ ಸಾಮಾಜಿಕ ನ್ಯಾಯ ಸಿಕ್ಕಿದೆ. ಭಾರತೀಯ ಪ್ರಜೆಗಳೆಲ್ಲರೂ ಕೂಡ ಸಂವಿಧಾನದ ಪಾಲನೆ ಮಾಡಬೇಕು. ರಾಜ್ಯ ಸರ್ಕಾರ ಒಂದು ತಿಂಗಳುಗಳ ಕಾಲ ಸಂವಿಧಾನ ಜಾಗೃತಿ ಜಾತ ಹಮ್ಮಿಕೊಂಡಿದ್ದು ಹೆಮ್ಮೆಯ ವಿಷಯ.

ಭಾರತೀಯ ಪ್ರತಿಯೊಬ್ಬ ಪ್ರಜೆಯೂ ಕೂಡ ಸಂವಿಧಾನದ ಆಶೆಯನ್ನು ತಿಳಿದುಕೊಳ್ಳಬೇಕು ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಸಂವಿಧಾನ ಜಾಗೃತಿ ರಥಯಾತ್ರೆ ಸಂಚರಿಸಲಿದ್ದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಮಹತ್ವ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.

Advertisements

ಈ ಸಂದರ್ಭದಲ್ಲಿ ಸೊನ್ನ ವಿರಕ್ತಮಠದ ಶಿವಾನಂದ ಸ್ವಾಮೀಜಿ, ತಾಲೂಕು ದಂಡಾಧಿಕಾರಿ ಮಲ್ಲಣ್ಣ ಯಲಗೋಡ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮೋನಮ್ಮ ಸುತಾರ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ತಾಲೂಕು ಪಂಚಾಯಿತಿ ಇ.ಒ ಅಬ್ದುಲ್ ನಬಿ, ಡಾ. ಸಿದ್ದು ಪಾಟೀಲ್, ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಸಂವಿಧಾನ ಪ್ರಿಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X