ಬೆಂಗಳೂರು| ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಾವು

Date:

Advertisements

ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಐವರಿಗೆ ಗಂಭೀರ ಗಾಯ

Advertisements

ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್​ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರ ಮೃತದೇಹಗಳು ಆರ್​.ಆರ್​.ನಗರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಗ್ನಿ ದುರಂತ ಬಗ್ಗೆ ಕುಂಬಳಗೋಡು ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಖಾಲಿ ಜಾಗದ ಶೆಡ್​ನಲ್ಲಿ ಪರ್ಫ್ಯೂಮ್ ಕೆಮಿಕಲ್ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಒಟ್ಟು 8 ಸಿಬ್ಬಂದಿ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಫಿಲ್ಲಿಂಗ್ ವೇಳೆ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ.  ಅಗ್ನಿ ದುರಂತದಲ್ಲಿ 1 ಬೈಕ್, 1 ಕಾರು ಹಾಗೂ ಆಟೋ ಸಂಪೂರ್ಣ ಹಾನಿಯಾಗಿದ್ದು, ಬೆಂಕಿಯ ತೀವ್ರತೆಗೆ ಅಕ್ಕಪಕ್ಕದ ಮನೆಯ ವಸ್ತುಗಳು ಬೆಂಕಿಗಾಹುತಿ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X