ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ದಲಿತರು, ಹಿಂದುಳಿದವರು ಹಾಗೂ ರಾಷ್ಟ್ರಪತಿಗಳನ್ನು ಕೂಡ ಆಹ್ವಾನಿಸದೆ ಅವರಿಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಭಾರತ್ ಜೋಡೋ ನ್ಯಾಯಯಾತ್ರೆ ಅಂಗವಾಗಿ ಉತ್ತರ ಪ್ರದೇಶದ ರಾಮ್‌ಪುರ ಖಾಸ್ ವಿಧಾನಸಭಾ ಕ್ಷೇತ್ರದ ಲಾಲ್‌ಗಂಜ್ ಇಂದಿರಾ ಚೌಕ್‌ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಉದ್ಯಮಿಗಳು ಹಾಗೂ ಅಮಿತಾಭ್ ಬಚ್ಚನ್ ಅವರನ್ನು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ಆಹ್ವಾನಿಸಿ ದೇಶದಲ್ಲಿರುವ ಶೇ.73 ರಷ್ಟರಿರುವ ದಲಿತರು ಹಾಗೂ ಹಿಂದುಳಿದವರು ಮುಖ್ಯರಲ್ಲ ಎಂದು ಮೋದಿ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ
”ಮೋದಿ ರೈತರ ಜೇಬಿನಿಂದ ಕತ್ತರಿಸಿ ಶ್ರೀಮಂತರ ಜೇಬುಗಳನ್ನು ತುಂಬಿಸುತ್ತಿದೆ. ಧರ್ಮದ ಹೆಸರಿನಲ್ಲಿ ದೇಶದಲ್ಲಿ ದ್ವೇಷವನ್ನು ಹರಡುವ ಕೆಲಸ ಮಾಡಲಾಗುತ್ತಿದೆ. ದೇಶದ ಯುವಕರಿಗೆ ಉದ್ಯೋಗ ಹಾಗೂ ಮಹಿಳೆಯರಿಗೆ ಭದ್ರತೆ ಒದಗಿಸಲು ಸರ್ಕಾರ ವಿಫಲವಾಗಿದೆ. ಮೋದಿಯ ಕೈಗೊಂಬೆಗಳಾಗಿರುವ ಇ.ಡಿ ಹಾಗೂ ಸಿಬಿಐ ಸಂಸ್ಥೆಗಳು ವಿಪಕ್ಷಗಳನ್ನು ಬೆದರಿಸುವ ಕೆಲಸ ಮಾಡುತ್ತಿವೆ” ಎಂದರು.
ಜಿಲ್ಲಾ ಪ್ರಧಾನ ಕಚೇರಿಯ ಮೂಲಕ ಲಾಲ್‌ಗಂಜ್ ಇಂದಿರಾ ಚೌಕ್‌ಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದರು.
ರಾಜ್ಯಸಭಾ ಸದಸ್ಯ ಪ್ರಮೋದ್ ತಿವಾರಿ, ಶಾಸಕರಾದ ಆರಾಧನ ಮಿಶ್ರಾ ಹಾಗೂ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಇಲಾಖೆಯ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್ ಪ್ರತಾಪ್‌ಗಿರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.