ತಮಿಳುನಾಡಿಗೆ ‘6 ಟ್ರಂಕ್‌ಗಳೊಂದಿಗೆ ಬಂದು ಜಯಲಲಿತಾರ ಚಿನ್ನಾಭರಣ ಪಡಕೊಳ್ಳಿ’ ಎಂದ ಕೋರ್ಟ್‌!

Date:

Advertisements

ಬೆಂಗಳೂರು ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯ ದಿನಾಂಕ ನಿಗದಿಪಡಿಸಿದೆ.

ಆರ್‌ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನಗರದ 36ನೇ ಸಿಟಿ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯದ ನ್ಯಾಯಾಧೀಶರು, 2024ರ ಮಾರ್ಚ್​ 6 ಮತ್ತು 7ರಂದು ದಿನಾಂಕ ನಿಗದಿಪಡಿಸಿದ್ದು, ಆ ಎರಡು ದಿನಗಳಂದು ಇತರೆ ಪ್ರಕರಣಗಳ ವಿಚಾರಣೆ ನಡೆಸದಿರಲು ನಿರ್ಧರಿಸಿದ್ದಾರೆ.

ಅಲ್ಲದೆ, ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲು ಅಧಿಕೃತ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿದ್ದು, ತಮಿಳುನಾಡು ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಐಜಿಪಿ ಅವರೊಂದಿಗೆ ಬರಬೇಕು. ಈ ವೇಳೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್​ ಮತ್ತು ಆರು ದೊಡ್ಡ ಪೆಟ್ಟಿಗೆ (ಟ್ರಂಕ್​) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಬಂದು ಚಿನ್ನಾಭರಣಗಳನ್ನು ಪಡೆದುಕೊಳ್ಳಬೇಕು. ಈ ಅಂಶವನ್ನು ತಮಿಳುನಾಡು ಡಿವೈಎಸ್​ಪಿ ಅವರು ತಮಿಳುನಾಡು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Advertisements

city civil court bangalore

ಅಲ್ಲದೆ, ಈ ಸಂದರ್ಭದಲ್ಲಿ ಸಿವಿಲ್​ ನ್ಯಾಯಾಲಯದಲ್ಲಿ ಎರಡು ದಿನಗಳ ಕಾಲ ಅಗತ್ಯವಿರುವ ಭದ್ರತೆಯನ್ನು ಸ್ಥಳೀಯ ಪೊಲೀಸರಿಂದ ಕಲ್ಪಿಸಲು ನ್ಯಾಯಾಲಯದ ರಿಜಿಸ್ಟ್ರಾರ್​ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು 2024ರ ಮಾರ್ಚ್ 6ಕ್ಕೆ ಮುಂದೂಡಲಾಗಿದೆ.

5 ಕೋಟಿ ಡಿಡಿ ನೀಡಿದ ತಮಿಳುನಾಡು

ಪ್ರಕರಣದ ವಿಚಾರಣೆಗಾಗಿ ಕರ್ನಾಟಕ ಸರ್ಕಾರ ವೆಚ್ಚ ಮಾಡಿದ್ದ 5 ಕೋಟಿ ರೂ.ಗಳ ಡಿಡಿಯನ್ನು ಈಗಾಗಲೇ ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ನೀಡಿದೆ. ಆದರೆ, ಇನ್ನೂ ರಾಜ್ಯ ಸರ್ಕಾರದ ಖಾತೆಗೆ ಬರುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Jayalalitha

ಜಯಲಲಿತಾರ ಬಳಿಯಿತ್ತು 7 ಕೆ.ಜಿ ಚಿನ್ನ!

7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜಿರೇಟರ್, 10 ಟಿ.ವಿ. ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್‌ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

ಪ್ರಕರಣದ ಹಿನ್ನೆಲೆ ಏನು?

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜೊತೆಗೆ, ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡದ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು. ಈ ನಡುವೆ ಡಿಸೆಂಬರ್ 5,2016ರಂದು ಚೆನ್ನೈನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಜಯಲಿತಾ ಅವರು ಮೃತಪಟ್ಟಿದ್ದರು. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಮೊದಲು ನಟಿಯಾಗಿದ್ದ ಜಯಲಲಿತಾ ಅವರು ಬಳಿಕ ರಾಜಕೀಯಕ್ಕೆ ಕಾಲಿಟ್ಟಿದ್ದರು. ರಾಜಕೀಯಕ್ಕೆ ಬಂದ ಬಳಿಕ ಒಟ್ಟು ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X