ದಾವಣಗೆರೆ | ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ನಿತ್ಯ ಹಳ್ಳಿಗಳಿಗೆ ಭೇಟಿ: ಇಒ ಕೆ ಟಿ ಕರಿಬಸಪ್ಪ

Date:

Advertisements

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ನಿತ್ಯ ಭೇಟಿ ನೀಡಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುವಂತೆ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಡಾ ಸುರೇಶ್ ಬಿ ಇಟ್ನಾಳ್ ನೀಡಿರುವ ಆದೇಶದಂತೆ ನಿತ್ಯವೂ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಗಳೂರು ಇಒ ಕೆ ಟಿ ಕರಿಬಸಪ್ಪ ಹೇಳಿದರು.

ಜಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಶಾಸಕ ಬಿ ದೇವೇಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್‌ ಸಭೆಗೂ ಮುನ್ನ ಗ್ರಾಮಗಳಲ್ಲಿ ವಾಸ್ತವ ಏನೆಂದು ತಿಳಿಯಲು ಗ್ರಾಮೀಣ ಕುಡಿಯುವ ನೀರು ಇಲಾಖೆ ಎಇಇ ಸಾದಿಕ್ ಉಲ್ಲಾ, ತಹಶೀಲ್ದಾ‌ರ್ ಚಂದ್ರಶೇಖರ್ ನಾಯ್ಕ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ, ಸಮಸ್ಯಾತ್ಮಕ ಗ್ರಾಮಗಳಲ್ಲಿ ಸಾಧ್ಯವಾದಷ್ಟು ಸ್ಥಳದಲ್ಲೇ ಬಗೆಹರಿಸುವ ಪ್ರಯತ್ನ ಮಾಡಲಾಗುವುದು” ಎಂದರು.

“ಖಾಸಗಿ ಬೋರ್ವೆಲ್ ಮಾಲೀಕರ ಜತೆಗೆ ಒಪ್ಪಂದ ಮಾಡಿಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಿರುತ್ತದೆ. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಾದ ಭೈರನಾಯಕನಹಳ್ಳಿ, ಹೊಸೂರು, ತಾರೆಹಳ್ಳಿ, ಗೌಡಗೊಂಡನಹಳ್ಳಿ, ಹನುಮಂತಾಪುರ, ಕಾಟೇನಹಳ್ಳಿ, ಸೂರಗೊಂಡನಹಳ್ಳಿ, ಪಲ್ಲಾಗಟ್ಟೆ, ಗೌಡಿಕಟ್ಟೆ, ಸಿದ್ದಯ್ಯನಕೋಟೆ, ಉಜ್ಜಪ್ಪವಡೆರಹಳ್ಳಿ, ಉಚ್ಚಂಗಿಪುರ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸ್ಥಳದಲ್ಲೇ ಸಮಸ್ಯೆ ಇತ್ಯರ್ಥಕ್ಕೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು” ಎಂದು ಮಾಹಿತಿ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಮಕ್ಕಳ ಕಲಿಕಾ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು: ಇಒ

“ಸಮಸ್ಯೆ ಉಲ್ಬಣಗೊಂಡು ಹೆಚ್ಚಾಗುವ ಮುನ್ನವೇ ತಾಲೂಕಾಡಳಿತ ಎಚ್ಚೆತ್ತುಕೊಂಡು ತುರ್ತಾಗಿ ಕ್ರಮ ಕೈಗೊಂಡು ಸೂಕ್ತ ಪರಿಹಾರ ಒದಗಿಸಲು ಸಿದ್ದವಿದೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X