9 ತಿಂಗಳಲ್ಲಿ 77 ಸಾವಿರ ಕೋಟಿ ರೂ. ಹೂಡಿಕೆ; ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಾಕ್ಷಿ: ಸಿದ್ದರಾಮಯ್ಯ

Date:

Advertisements

ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ರೂ. ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿ, “ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ” ಎಂದರು.

“ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ 77 ಸಾವಿರ ಕೋಟಿ ರೂ. ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ, ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ” ಎಂದು ವಿವರಿಸಿದರು.

Advertisements

“ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು. ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್” ಎಂದು ಟೀಕಿಸಿರು.

 ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

“ಬಿಜೆಪಿ ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದು ಟೀಕಿಸಿ, ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ? ಇದ್ದರೆ ತೋರಿಸಿ” ಎಂದು ಸವಾಲು ಹಾಕಿದರು.

“ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X