ಎಸ್ಎಸ್ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Date:

Advertisements

2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್​ 1 ರಿಂದ 22 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಮಾರ್ಚ್​​ 25 ರಿಂದ ಏಪ್ರಿಲ್​ 6 ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಈ ವರ್ಷ 8,96,271 ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ” ಎಂದು ಹೇಳಿದ್ದಾರೆ.

”6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ” ಎಂದು ಮಾಹಿತಿ ನೀಡಿದರು.

Advertisements

”2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ  20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ. ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತದೆ. ಅಡ್ವೋಕೇಟ್ ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ” ಎಂದಿದ್ದಾರೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಮೊದಲ ಚಾಲಕ ರಹಿತ ರೈಲಿನ ಫೋಟೋ ಬಿಡುಗಡೆ

2024 ಎಸ್ಎಸ್ಎಲ್ಸಿ ವೇಳಾಪಟ್ಟಿ

25-03-2024 ಸೋಮವಾರ ಪ್ರಥಮ ಭಾಷೆ ಪರೀಕ್ಷೆ ಕನ್ನಡ, ತೆಲುಗು, ಹಿಂದಿ, ಮರಾಥಿ, ತಮಿಳು, ಉರ್ದು, ಇಂಗ್ಲೀಷ್‌, ಇಂಗ್ಲೀಷ್‌ (NCERT)

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ

30-03-3034 ರಂದು ವಿಜ್ಞಾನ, ರಾಜ್ಯಶಾಸ್ತ್ರ ಪರೀಕ್ಷೆ

02-04-2024 ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ

03-04-2024 ರಂದು ಅರ್ಥಶಾಸ್ತ್ರ ಪರೀಕ್ಷೆ

ದ್ವಿತೀಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10.15ಕ್ಕೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ.

ಪರೀಕ್ಷಾ ವೇಳಾಪಟ್ಟಿ 

01-03-2024ರಂದು ಕನ್ನಡ ಹಾಗೂ ಅರೇಬಿಕ್ಪರೀಕ್ಷೆ

04-03-2024ರಂದು ಗಣಿತ ಪರೀಕ್ಷೆ

05-03-2024ರಂದು ರಾಜ್ಯಶಾಸ್ತ್ರ ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋ ಮೊಬೈಲ್ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲೀಷ್ಪರೀಕ್ಷೆ

15-03-2024ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ ರಸಾಯನ ಶಾಸ್ತ್ರ ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024ರಂದು ಭೂಗೋಳ ಶಾಸ್ತ್ರ ಜೀವಶಾಸ್ತ್ರ ಪರೀಕ್ಷೆ

20-03-2024ರಂದು ಸಮಾಜಶಾಸ್ತ್ರ ವಿದ್ಯುನ್ಮಾನ ಶಾಸ್ತ್ರ ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X