ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಇವರಿಬ್ಬರು ನಿರುದ್ಯೋಗಿ ಯುವಕರನ್ನು ಟಾರ್ಗೆಟ್ ಮಾಡಿ ಅವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದರು. ರಾಜಕಾರಣಿಗಳ ಪರಿಚಯವಿದೆ. ಜತೆಗೆ ನಾನಾ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು ಪರಿಚಯವಿದ್ದಾರೆ. ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಕೆಲಸ ಕೊಡಿಸುತ್ತೇವೆ ಎಂದು ನಿರುದ್ಯೋಗಿ ಯುವಕರನ್ನು ನಂಬಿಸಿದ್ದಾರೆ.
ಬಳಿಕ ನಿರುದ್ಯೋಗಿ ಯುವಕರಿಂದ ಲಕ್ಷ ಲಕ್ಷ ಹಣ ಪಡೆದು ಮೋಸ ಮಾಡುತ್ತಿದ್ದರು. ಓರ್ವ ನಿರುದ್ಯೋಗಿಯಿಂದ ₹6 ಲಕ್ಷ ಹಣ ಪಡೆದು ಕೆಲಸ ಕೊಡಿಸದೇ ಸತಾಯಿಸುತ್ತಿದ್ದರು. ಈ ಆರೋಪಿಗಳ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಅಲ್ಲದೇ, ನಗರದ ಹಲವು ಠಾಣೆಗಳಲ್ಲಿ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧ ಆರೋಪ; ಪತ್ನಿ ಮೇಲೆ ನಡುರಸ್ತೆಯಲ್ಲೇ ಹಲ್ಲೆಗೈದ ದುಷ್ಟ ಪತಿ
ಸದ್ಯ ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 2 ಲಕ್ಷ ನಗದು ಹಣ, 4 ಫೋನ್, ಒಂದು ದ್ವಿಚಕ್ರ ವಾಹನ, 6 ಬ್ಯಾಂಕ್ ಅಕೌಂಟ್‌ಗೆ ಸೇರಿದಂತೆ 16 ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್, 11 ನಾನಾ ಕಂಪನಿಯ ವಾಚ್‌ಗಳು, ಚಿನ್ನದಂತೆ ಕಾಣುವ 2 ನಕಲಿ ಬ್ರೇಸ್ ಲೈಟ್, 1 ಚೈನ್, 2 ಉಂಗುರ, 2 ಪೆಂಡೆಂಟ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.