ಕಲಬುರಗಿ ಪಾಲಿಕೆ ಅಧಿಕಾರಿಗಳು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿರುವುದಾಗಿ ಆರೋಪಿಸಿ ಪೌರಕಾರ್ಮಿಕರು ನಗರದಲ್ಲಿ ಸ್ವಚ್ಛತೆ ಕಾರ್ಯ ಸ್ಥಗಿತಗೊಳಿಸಿ ಪಾಲಿಕೆ ಕಚೇರಿ ಎದುರು ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಿದರು.
ಕಲಬುರಗಿ ಮಹಾನಗರ ಪಾಲಿಕೆಯಿಂದ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ತೆರಳಿ, “ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿ ಅಂಬದಾಸ್ ಕತ್ತಲ್ ಹಾಗೂ ಸಾವಿತ್ರಿಬಾಯಿ ಸಲಗರ ಅವರು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಾಗಿ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬದಾಸ್ ಕತ್ತಲ್, ಸಾವಿತ್ರಿಬಾಯಿ ಸಲಗರ್ ಅವರನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಒತ್ತಾಯಿಸಿದರು.
“ಅಂಬೇಡ್ಕರ್ ಅವರ ಕುರಿತು ಅವಹೇಳನವಾಗಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ಆಧಾರವಾಗಿ ಅವರನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಅಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮೊಟ್ಟೆ ಹಗರಣದ ತನಿಖೆಗೆ ಒತ್ತಾಯ
ದಲಿತ ಸೇನೆಯ ಪದಾಧಿಕಾರಿಗಳು, ಪೌರಕಾರ್ಮಿಕರು ಸೇರಿದಂತೆ ಹಲವು ಪ್ರಗತಿಪರ ಸಂಘಟನೆ ಕಾರ್ಯಕರ್ತರು ಇದ್ದರು.
