ಲೋಕಸಭಾ ಚುನಾವಣೆ | ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಅಥವಾ ಚಿಂಗಳೆಗೆ ಟಿಕೆಟ್!

Date:

Advertisements

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆಗಳು, ಚರ್ಚೆಗಳು ಹಾಗೂ ಸಭೆಗಳು ನಡೆಯುತ್ತಿವೆ. ನಾನಾ ಕ್ಷೇತ್ರಗಳಲ್ಲಿ ಹಲವಾರು ಆಕಾಂಕ್ಷಿಗಳ ಹೆಸರು ಮುನ್ನೆಲೆಯಲ್ಲಿದೆ. ಸದ್ಯಕ್ಕೆ ಚಿಕ್ಕೋಡಿ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆಗಾಗಿ ಸಚಿವ ಸತೀಶ್ ಜಾರಕಿಹೊಳಿ ಸಭೆ ನಡೆಸಿದ್ದು, ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಲಕ್ಷ್ಮಣರಾವ್‌ ಚಿಂಗಳೆ ಹೆಸರುಗಳು ಕೇಳಿಬಂದಿವೆ.

ಬೆಂಗಳೂರಿನ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಸಭೆ ನಡೆದಿದೆ. ಸಭೆಯಲ್ಲಿ ಸತೀಶ್‌ ಅವರು ಪುತ್ರಿ ಪ್ರಿಯಾಂಕಾ ಮತ್ತು ಕಾಂಗ್ರೆಸ್‌ ಚಿಕ್ಕೋಡಿ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳಿ ಹೆಸರುಗಳು ಪ್ರಸ್ತಾಪವಾಗಿವೆ. ಈ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್‌ ಮುಂದೆ ಪ್ರಸ್ತಾಪಿತ ಪಟ್ಟಿ ಇಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಹೆಚ್ಚಿನ ಪ್ರಾಬಲ್ಯ ಹೊಂದಿದ್ದಾರೆ. ಅವರು ವಾಲ್ಮೀಕಿ ನಾಯಕ ಸಮುದಾಯಕ್ಕೆ ಸೇರಿದ್ದು, ಅವರ ಪುತ್ರಿಗೆ ಟಿಕೆಟ್ ನೀಡದರೆ, ಗೆಲುವು ಸುಲಭ ಎಂಬ ಮಾತುಗಳಿವೆ. ಅಲ್ಲದೆ, ಕುರುಬ ಸಮುದಾಯದ ಮುಖಂಡರಾದ ಲಕ್ಷ್ಮಣರಾವ್ ಚಿಂಗಳೆ ಅವರಿಗೆ ಟಿಕೆಟ್‌ ನೀಡಿದರೂ, ಮತದಾರರನ್ನು ಸೆಳೆಯಬಹುದು ಎನ್ನಲಾಗುತ್ತಿದೆ.

Advertisements

ಕಣಕ್ಕಿಳಿಯುವ ಅಭ್ಯರ್ಥಿಗಳು ಎಲ್ಲ ಸಮುದಾಯದ ಮತದಾರರು ಒಪ್ಪುವಂತವರಾಗಿರಬೇಕು. ಅಭ್ಯರ್ಥಿಗಳಿಗೆ ಶಾಸಕರಿಂದ ವಿರೋಧ ಬರಬಾರದು ಎಂದು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಚಿಕ್ಕೋಡಿ ಟಿಕೆಟ್‌ಗಾಗಿ ಆರು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ, ಪ್ರಿಯಾಂಕಾ ಮತ್ತು ಚಿಂಗಳೆ ಅವರನ್ನು ಅಂತಿಮ ಪ್ರಸ್ತಾವನೆ ಪಟ್ಟಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ, ಶಾಸಕ ಲಕ್ಷ್ಮಣ ಸವದಿ, ವಿಶ್ವಾಸ ವೈದ್ಯ, ರಾಜು ಕಾಗೆ, ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳಕರ, ಕಾಂಗ್ರೆಸ್‌ ಎಸ್‌ಸಿ, ಎಸ್‌ಟಿ ಘಟಕದ ಅಧ್ಯಕ್ಷ ಅರ್ಜುನ ನಾಯಕವಾಡಿ, ಮುಖಂಡರಾದ ಎಚ್‌.ಬಿ ಘಾಟಗೆ, ಮಾರುತಿ ಮೋಹಿತೆ ಸೇರಿದಮತೆ ಬೆಳಗಾವಿಯ ಹಲವಾರು ಮುಖಂಡರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X