33 ಹೊಸ ತಳಿ ಬಿಡುಗಡೆಗೆ ಶಿಫಾರಸು: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

Date:

Advertisements

ರಾಜ್ಯದಲ್ಲಿ ರೋಗ ನಿರೋಧಕ, ಕೀಟ ನಿರೋಧಕ ಹಾಗೂ ಅಧಿಕ ಇಳುವರಿ ತಳಿಗಳನ್ನು ಅಭಿವೃದ್ಧಿಪಡಿಸಲು ಕೃಷಿ ವಿವಿಗಳು ನಿರಂತರವಾಗಿ ಸಂಶೋಧನೆ ನಡೆಸುತ್ತಿವೆ. 2023-24ನೇ ಸಾಲಿನಲ್ಲಿ 31 ತಳಿಗಳನ್ನು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಕೋಲಾರ ಶಾಸಕ ಕೊತ್ತನೂರು ಮಂಜುನಾಥ್ ಅವರು ವಿಧಾನಸಭೆಯಲ್ಲಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಕೇಂದ್ರೀಯ ಬೀಜ ಸಮಿತಿ ಹಾಗೂ ರಾಜ್ಯ ಮಟ್ಟದಲ್ಲಿ ರಾಜ್ಯ ಬೀಜ ಉಪಸಮಿತಿಯನ್ನು ರಚಿಸಲಾಗಿದೆ” ಎಂದರು.

“ಹವಾಮಾನ ವೈಪರೀತ್ಯಗಳಾದ ಉಷ್ಣಾಂಶ, ತೇವಾಂಶ ಹಾಗೂ ಮಳೆಯಲ್ಲಿ ಬದಲಾವಣೆ ಹಾಗೂ ರೈತರು ಅನುಸರಿಸುವ ಬೇಸಾಯ ಪದ್ಧತಿಗಳಿಂದ ಕೀಟ/ ರೋಗಗಳ ಬಾಧೆ ಹೆಚ್ಚಾಗಿ ಸಸ್ಯಸಂರಕ್ಷಣಾ ಔಷಧಿಗಳ ಸಿಂಪರಣೆ ಅನಿವರ‍್ಯವಾಗಿರುತ್ತದೆ” ಎಂದರು.

Advertisements

ಬೀಜಗಳ ಪೂರೈಕೆ

“ರಾಜ್ಯದ ಎಲ್ಲ ವರ್ಗದ ರೈತರಿಗೆ ಗರಿಷ್ಠ 2 ಹೆಕ್ಟೇರ್ ಮಿತಿಯೊಳಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲು ‘ಕೃಷಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣ ’ಯೋಜನೆಯಡಿ “ಬೀಜಗಳ ಪೂರೈಕೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ರಾಜ್ಯ ಸರ್ಕಾರದ ‘ಕೃಷಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣ’ ಯೋಜನೆಯಡಿ “ಬೀಜಗಳ ಪೂರೈಕೆ” ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ 6.12ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೂ.15,530.42 ಲಕ್ಷಗಳ ರಿಯಾಯಿತಿ ದರದಲ್ಲಿ 13.08 ಲಕ್ಷ ರೈತರಿಗೆ ವಿತರಿಸಲಾಗಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X