60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನಾಳೆಯಿಂದ (ಫೆ.22) ವಿತರಣೆ: ಸಚಿವ ಮಧು ಬಂಗಾರಪ್ಪ

Date:

Advertisements

ನಾಳೆಯಿಂದ (ಫೆ.22) ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ” ಎಂದರು.

ಕೆಎಫ್​ಡಿ ಕಾಯಿಲೆಯಿಂದ ಮೃತಪಟ್ಟವರಿಗೆ ಪರಿಹಾರ ಕೊಡುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, “ಕೆಎಫ್​ಡಿಯಿಂದ ಮೃತಪಟ್ಟವರಿಗೆ ಪರಿಹಾರ ಕೊಡಬೇಕು ಎಂದು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಕೆಎಫ್​ಡಿಯಿಂದ ಮೃತಪಟ್ಟವರ ಮಾಹಿತಿ ಕೊಡಲು ಸೂಚಿಸಿದ್ದೇನೆ. ಪರಿಹಾರ ಕೊಡುವ ಬಗ್ಗೆ ಗಮನ ಹರಿಸಲಾಗುವುದು” ಎಂದು ಹೇಳಿದರು.

ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರಕಾರ ಪರಿಹಾರ ನೀಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿ, “ಬಂಗಾರಪ್ಪ ಅವರು ಸಿಎಂ ಆಗಿದ್ದಾಗ ಸತ್ಯಸಾಯಿ ಬಾಬಾ ಆಸ್ಪತ್ರೆಗೆ 2 ಕೋಟಿ ಕೊಟ್ಟಿದ್ದರು. ಅದಕ್ಕೂ ವಿರೋಧ ಬಂದಿತ್ತು. ನಮ್ಮ ರಾಜ್ಯದ ರೋಗಿಗಳು ಆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಅಂದಿದ್ದರು. ಅದೇ ರೀತಿ ಆನೆ ತುಳಿದು ಮೃತಪಟ್ಟಿದ್ದಕ್ಕೆ ಪರಿಹಾರ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಯಾವುದೇ ಕೆಲಸ ಇಲ್ಲ. ಅದಕ್ಕೆ ಇಂತಹ ಕೆಲಸ ಮಾಡ್ತಾರೆ. ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆಗೆ ಸರ್ಕಾರ ಯಾವುದೇ ಆದೇಶ ಮಾಡಿರಲಿಲ್ಲ. ಯಾವುದೋ ವಾಟ್ಸಾಪ್ ನಲ್ಲಿ ಬಂದ ಮೆಸೇಜ್​ನಿಂದ ಗೊಂದಲವಾಗಿದೆ” ಎಂದು ತಿಳಿಸಿದರು.

“ಶಿವಮೊಗ್ಗ ಜಿಲ್ಲೆಗೆ 100 ಹೊಸ ಸಾರಿಗೆ ಬಸ್ ಕೇಳಿದ್ದೆ. ಸದ್ಯಕ್ಕೆ 10 ಬಸ್ ಬಂದಿದೆ. ಫೆ.24 ರಂದು ನಡೆಯುವ ಗ್ಯಾರಂಟಿ ಸಮಾವೇಶದಲ್ಲಿ ಬಸ್ ಉದ್ಘಾಟಿಸಲಾಗುವುದು” ಇದೇ ವೇಳೆ ಮಧು ಬಂಗಾರಪ್ಪ‌ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

Download Eedina App Android / iOS

X