ಕನ್ನಡಿಗರಿಗೆ ನೀಡಿದ ಉದ್ಯೋಗದ ಮಾಹಿತಿ ನೋಟೀಸ್ ಬೋರ್ಡ್‌ನಲ್ಲಿ ಪ್ರದರ್ಶಿಸುವುದು ಕಡ್ಡಾಯ: ಶಿವರಾಜ್ ತಂಗಡಗಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಎಮ್‌ಎನ್‌ಸಿ (ಬಹುರಾಷ್ಟ್ರೀಯ) ಕಂಪನಿಗಳು ಉದ್ಯೋಗ ನೀಡಿರುವ ಕನ್ನಡಿಗರ ಸಂಖ್ಯೆಯನ್ನು ತಮ್ಮ ಕಚೇರಿಯ ಆವರಣದ ನೋಟೀಸ್ ಬೋರ್ಡ್‌ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಸೂಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು, ಕೈಗಾರಿಕೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆಯಲ್ಲಿ ಇರಬೇಕು ಎಂಬುದನ್ನು ಖಾತ್ರಿಪಡಿಸಲು ತರಲಾದ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ–2024’ ಕುರಿತು ವಿಧಾನಪರಿಷತ್ತಿನಲ್ಲಿ ಮಂಗಳವಾರ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಈ ವಿಷಯದಲ್ಲಿ ಬಿಜೆಪಿ ಸದಸ್ಯರು ಕನ್ನಡ ಪರ ನಿಲ್ಲಬೇಕು ಎಂದು ಮನವಿ ಮಾಡಿದರು.

“ಕನ್ನಡ ಭಾಷೆಯ ರಕ್ಷಣೆ ಮತ್ತು ಪ್ರಾಧಾನ್ಯತೆಯನ್ನು ಖಚಿತ ಮಾಡಿಕೊಳ್ಳಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಬಹುರಾಷ್ಟ್ರೀಯ ಕಂಪನಿಗಳು ಸಾಕಷ್ಟು ಸಂಖ್ಯೆಯ ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಖಚಿತಪಡಿಸಿಕೊಳ್ಳಲು, ವಿವರಗಳನ್ನು ಪ್ರದರ್ಶಿಸಲು ಸರ್ಕಾರವು ಸೂಚಿಸಲಿದೆ. ಉದ್ಯಮಗಳ ನೋಟಿಸ್ ಬೋರ್ಡ್​ಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಿರುವ ಮಸೂದೆ ಇದಾಗಿದೆ” ಎಂದು ಹೇಳಿದರು.

Advertisements

“ಕನ್ನಡವನ್ನು ರಕ್ಷಿಸಲು, ಉತ್ತೇಜಿಸಲು ಹಾಗೂ ಬಲಪಡಿಸಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ನ್ಯಾಯಾಂಗದಲ್ಲಿಯೂ ಸಹ ಕನ್ನಡದಲ್ಲಿ ತೀರ್ಪುಗಳನ್ನು ನೀಡಲು ಮತ್ತು ಕನ್ನಡದಲ್ಲಿ ವಾದಿಸಲು ವಕೀಲರನ್ನು ಪ್ರೇರೇಪಿಸಲು ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ನ್ಯಾಯಾಂಗದಲ್ಲಿ ಕನ್ನಡವನ್ನು ಬಲಪಡಿಸಲು ಸರ್ಕಾರ ಮುಂದಾಗಿದೆ” ಎಂದು ತಿಳಿಸಿದರು.

“ಕರ್ನಾಟಕದಲ್ಲಿರುವ ಕೈಗಾರಿಕೆಗಳು ಉದ್ದಿಮೆ ಸಂಸ್ಥೆಗಳಲ್ಲಿ ಉದ್ಯೋಗಿಗಳ ಭಾಷಿಕ ವಿವರವನ್ನು ಡ್ಯಾಷ್‌ಬೋರ್ಡ್‌ನಲ್ಲಿ ಪ್ರಕಟಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಮುಖ್ಯಸಚೇತಕ ಸಲೀಂ ಅಹಮದ್ ಅವರು ಇಲ್ಲಿ ಉದ್ದಿಮೆ ಆರಂಭಿಸುವವರು ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಖಾತ್ರಿಪಡಿಸಲು ಕ್ರಮ ಆಗಬೇಕಿದೆ. ಉದ್ದಿಮೆ ಆರಂಭಿಸಿದವರು ಯಾವ ಯಾವ ಭಾಷೆಯವರಿಗೆ ಉದ್ಯೋಗ ನೀಡಿದ್ದಾರೆ. ಅದರಲ್ಲಿ ಕನ್ನಡಿಗರ ಸಂಖ್ಯೆ ಎಷ್ಟು ಎಂಬುದನ್ನು ಎಲ್ಲರಿಗೂ ಗೊತ್ತಾಗುವ ರೀತಿಯಲ್ಲಿ ಡ್ಯಾಷ್‌ ಬೋರ್ಡ್‌ನಲ್ಲಿ ಪ್ರಕಟಿಸುವಂತೆ ಮಾಡುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸೈಬರ್ ವಂಚನೆ | ರಿಯಾಯಿತಿ ದರದಲ್ಲಿ ಶೇರು ನೀಡುವುದಾಗಿ ನಂಬಿಸಿ ಉದ್ಯಮಿಗೆ ₹6 ಕೋಟಿ ವಂಚನೆ

ಇನ್ನು ಕನ್ನಡಕ್ಕೆ ಅವಮಾನವಾಗುವಂತಹ ಘಟನೆಗಳು ನಡೆದರೇ ನಾಗರಿಕರು ಆ್ಯಪ್ ಮೂಲಕ ದೂರು ಸಲ್ಲಿಸಬಹುದು. ಅಲ್ಲದೇ, ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯುವ ಬಗ್ಗೆ ಪರಿಶೀಲಿಸಲಾಗುವುದು. ಜತೆಗೆ ಕನ್ನಡ ಅಭಿವೃದ್ಧಿಯ ರಾಜ್ಯ ಮಟ್ಟದ ಸಮಿತಿಗೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಸೇರಿಸಲು ಕೆಲವು ಸದಸ್ಯರು ಅಲಹೆ ನೀಡಿದ್ದಾರೆ. ಅದನ್ನು ಸಹ ಪರಿಶೀಲಿಸಲಾಗುವುದು” ಎಂದು ತಿಳಿಸಿದರು.

ಅಂಗಡಿ-ಮುಂಗಟ್ಟುಗಳ ಮುಂದೆ ಸೂಚನಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವುದು ಸೇರಿದಂತೆ ಕನ್ನಡದ ರಕ್ಷಣೆಗೆ ಸಂಬಂಧಿಸಿದ ಅನೇಕ ಅಂಶಗಳು ವಿಧೇಯಕದಲ್ಲಿವೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಕಳೆದ ವಾರ ಅನುಮೋದನೆ ಪಡೆಯಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X