ಹಾವೇರಿ | ಉದ್ಯೋಗ, ಶಿಕ್ಷಣ ಮೂಲಭೂತ ಹಕ್ಕಾಗಬೇಕು: ಬಸವರಾಜ ಪೂಜಾರ

Date:

Advertisements

ಸ್ವಾತಂತ್ರ್ಯ ಹೋರಾಟದ ಪ್ರಮುಖ ಆಶಯ ಸಮಾನತೆಯು ದೇಶದಲ್ಲಿ ಸಮರ್ಪಕವಾಗಿ ಜಾರಿಯಾಗಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.

ಹಾವೇರಿ ನಗರದ ಹೊಯ್ಸಳ ಐಟಿಐ ಕಾಲೇಜಿನಲ್ಲಿ ಬುಧವಾರ(ಫೆ.21) ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) 12ನೇ ರಾಜ್ಯ ಸಮ್ಮೇಳನದ ಭಾಗವಾಗಿ ಏರ್ಪಡಿಸಿದ್ದ ʼಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿʼ ವಿಷಯ ಕುರಿತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತು ಏಳು ದಶಕ ಕಳೆದರೂ ಸರ್ವರಿಗೂ ಶಿಕ್ಷಣ ದೊರೆಯದಿರುವ ಪರಿಣಾಮವಾಗಿ ಬಡವರ ಮಕ್ಕಳು ಇಂದಿಗೂ ಶಾಲೆಯಿಂದ ಹೊರಗುಳಿಯುತ್ತಿದ್ದಾರೆ. ಪ್ರಾಥಮಿಕ ಹಂತದಲ್ಲೇ ಈ ಸ್ಥಿತಿಯಿದ್ದು, ಉನ್ನತ ಶಿಕ್ಷಣವನ್ನು ಎಲ್ಲರಿಗೂ ಪಡೆಯಲಾಗುತ್ತಿಲ್ಲ. ಒಂದು ವೇಳೆ ಕಷ್ಟಪಟ್ಟು ಉನ್ನತ ಶಿಕ್ಷಣ ಪಡೆದರೂ ಉದ್ಯೋಗದ ಖಾತ್ರಿ ಒದಗಿಸುವಲ್ಲಿ ಸರಕಾರಗಳು ವಿಫಲವಾಗುತ್ತಿವೆ. ಆದ್ದರಿಂದಾಗಿ ಶಿಕ್ಷಣ, ಉದ್ಯೋಗದ ಹಕ್ಕಿಗಾಗಿ ಯುವಜನತೆ ಧ್ವನಿ ಎತ್ತಬೇಕಿರುವುದು ಅನಿವಾರ್ಯವಾಗಿದೆ ಎಂದರು.

ಡಿವೈಎಫ್ಐ ಜಿಲ್ಲಾ ಸಂಚಾಲಕರೂ, ಯುವ ವಕೀಲರಾದ ನಾರಾಯಣ ಕಾಳೆ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ವೃತ್ತಿಪರ ಕೋರ್ಸುಗಳನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡಿದರೂ, ಉದ್ಯೋಗ ಖಾತ್ರಿ ಪಡಿಸದಿರುವುದು ದುರಂತವಾಗಿದೆ. ಸರಕಾರ ಕೃಷಿ ಪೂರಕವಾದ ಕೈಗಾರಿಕೆಗಳನ್ನು ಆರಂಭಿಸುವ ಮೂಲಕ ಉದ್ಯೋಗ ಸೃಷ್ಠಿಸಲು ಮುಂದಾಗಬೇಕು ಎಂದರು.

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ರವರ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿ-ಯುವಜನ ಸಮುದಾಯ ಅಧ್ಯಯನದ ಜೊತೆಗೆ ದೇಶ ಕಟ್ಟುವ ಜವಾಬ್ದಾರಿ ಹೊರಬೇಕು. ಈ ನೆಲದ ಐಕ್ಯತೆ, ಸೌಹಾರ್ದತೆ ಹಾಗೂ ಸಮಗ್ರತೆಯನ್ನು ಗಟ್ಟಿಗೊಳಿಸಲು ಮುಂದಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರವಿ ಉಮ್ಮಣ್ಣವರ ವಹಿಸಿದ್ದರು. ಡಿವೈಎಫ್ಐ ಮುಖಂಡ ರಾಹುಲ ಕಡೆಮನಿ ನಿರ್ವಹಿಸಿದರು. ಬಸವರಾಜ ಗೋವಿಂದಪ್ಪನವರ ವಂದಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X