₹300 ಕೋಟಿ ಲಂಚಕ್ಕೆ ಆಫರ್ | ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ

Date:

Advertisements

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ದೆಹಲಿ ನಿವಾಸ ಮತ್ತು ಕಚೇರಿಗಳ ಮೇಲೆ ಗುರುವಾರ ಸಿಬಿಐ ದಾಳಿ ನಡೆಸಿದೆ.

ಜಮ್ಮು–ಕಾಶ್ಮೀರ ಪ್ರದೇಶದಲ್ಲಿ ಹೈಡಲ್ ಯೋಜನೆಗೆ (ಕಿರು ಜಲ ವಿದ್ಯುತ್ ಯೋಜನೆ) ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ದಾಳಿ ನಡೆಸಿದೆ. 100 ಅಧಿಕಾರಿಗಳನ್ನೊಳಗೊಂಡ ತಂಡವು ವಿವಿಧ ನಗರಗಳಲ್ಲಿನ 30 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಈ ಕಿರು ಜಲವಿದ್ಯುತ್ ಯೋಜನೆಗೆ 2,200 ಕೋಟಿ ರೂಪಾಯಿ ಮೌಲ್ಯದ ಸಿವಿಲ್ ಕಾಮಗಾರಿ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆಗಸ್ಟ್ 23, 2018ರಿಂದ ಅಕ್ಟೋಬರ್ 30, 2019ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್ ಅವರು ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿರುವ ಆರೋಪ ಸತ್ಯಪಾಲ್‌ ಮಲಿಕ್‌ ಮೇಲಿದೆ.

Advertisements

ಪ್ರಕರಣದ ಹಿನ್ನೆಲೆ

2019ರಲ್ಲಿ ಖಾಸಗಿ ಕಂಪನಿಯೊಂದಕ್ಕೆ ಕಿರು ಜಲವಿದ್ಯುತ್ ಯೋಜನೆ (ಎಚ್‌ಇಪಿ)ಗಾಗಿ ಸುಮಾರು 2,200 ಕೋಟಿ ಮೌಲ್ಯದ ಸಿವಿಲ್ ಕಾಮಗಾರಿಯ ಗುತ್ತಿಗೆಯನ್ನು ನೀಡುವಲ್ಲಿ ಅವ್ಯವಹಾರದ ಆರೋಪಗಳಿಗೆ ಈ ತನಿಖೆ ಸಂಬಂಧಿಸಿದೆ. ಏಪ್ರಿಲ್ 20, 2022ರಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಮನವಿ ಮೇರೆಗೆ ಈ ಬಗ್ಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅಂದಿನ ಕಿರು ಜಲವಿದ್ಯುತ್ ಯೋಜನೆಯ ಚಯರ್‌ ಮ್ಯಾನ್‌, ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್‌ನ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರ ಅಪರಿಚಿತರ ವಿರುದ್ಧ ಅವ್ಯವಹಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 2ರಂದು ಸಿಬಿಐ ದೆಹಲಿ, ನೋಯ್ಡಾ, ಚಂಡೀಗಢ ಮತ್ತು ಶಿಮ್ಲಾದ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಇದಲ್ಲದೆ ಜನವರಿ 29, 2024ರಂದು ಸಿಬಿಐ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 21ಲಕ್ಷಕ್ಕೂ ಹೆಚ್ಚು ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಮಲಿಕ್

“2024ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು” ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ್ದನ್ನು ಗಮನಿಸಬಹುದು.

ಈ ಮೊದಲು ಪುಲ್ವಮಾ ದಾಳಿ ಬಗ್ಗೆ ಮೋದಿ ಸರಕಾರದ ಬಗ್ಗೆ ಗಂಭೀರವಾದ ಆರೋಪವನ್ನು ಮಾಡಿದ್ದ ಸತ್ಯಪಾಲ್ ಮಲಿಕ್‌, “ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅದನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ” ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು.

ಹಾಗೆಯೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆ ಮಾಡಿ, “ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಮೌನವಾಗಿರುವಂತೆ ಸೂಚಿಸಿದ್ದರು” ಎಂದು ಹೇಳಿದ್ದರು.

ರೈತರ ಪ್ರತಿಭಟನೆಗೆ ಬೆಂಬಲ

ಅಲ್ಲದೇ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕೇಂದ್ರ ಸರಕಾರವನ್ನು ತರಾಟೆಗೆ ತಗೆದುಕೊಂಡಿದ್ದರು. ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಿ ಎಂದು ಮೋದಿ ಅವರಿಗೆ ಸಲಹೆ ನೀಡಿದಾಗ, “ಅವರು ನನಗಾಗಿ ಸತ್ತರೇ? ನಾನ್ಯಾಕೆ ಶ್ರದ್ಧಾಂಜಲಿ ಸಲ್ಲಿಸಲಿ” ಎಂದು ಮೋದಿ ಹೇಳಿದ್ದರು ಎಂದು ಮಲಿಕ್ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಣಿಪುರ ಹಿಂಸಾಚಾರದ ಬಗ್ಗೆಯೂ ಕೇಂದ್ರ ಸರಕಾರವನ್ನು ಟೀಕಿಸಿ ಹೇಳಿಕೆ ನೀಡಿದ್ದನ್ನು ಇಲ್ಲಿ ಗಮನಿಸಬಹುದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X