ವೆಂಕಟೇಶ್ ಅಯ್ಯರ್ ಗಳಿಸಿದ ಭರ್ಜರಿ ಶತಕದ ಹೊರತಾಗಿಯೂ ಮುಂಬೈ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ತಂಡ ಮುಗ್ಗರಿಸಿದೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ಕೆಕೆಆರ್, ಎಡಗೈ ಬ್ಯಾಟರ್ ವೆಂಕಟೇಶ್ ಅಯ್ಯರ್ ಗಳಿಸಿದ ಆಕರ್ಷಕ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 185 ರನ್‌ಗಳಿಸಿತ್ತು.
51 ಎಸೆತಗಳನ್ನು ಎದುರಿಸಿದ ಅಯ್ಯರ್, 9 ಭರ್ಜರಿ ಸಿಕ್ಸರ್ ಮತ್ತು 6 ಬೌಂಡರಿಗಳ ನೆರವಿನಿಂದ 104 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಇದು ಈ ಬಾರಿಯ ಐಪಿಎಲ್‌ನಲ್ಲಿ ದಾಖಲಾದ ಎರಡನೇ ಶತಕವಾಗಿದೆ.
ಆಂಡ್ರೆ ರಸೆಲ್ 21 ಮತ್ತು ರಿಂಕು ಸಿಂಗ್ 18 ರನ್‌ಗಳಿಸಿದರು.
ಚೇಸಿಂಗ್ ವೇಳೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಮೈದಾನಕ್ಕಿಳಿದ ರೋಹಿತ್ ಶರ್ಮಾ 20 ರನ್‌ಗಳಿಸಿ ಔಟಾದರು. ಇಶಾನ್ ಕಿಶಾನ್ 58 ರನ್‌ಗಳಿಸಿದರೆ ನಾಯಕ ಸೂರ್ಯ ಕುಮಾರ್ ಯಾದವ್ 43 ರನ್ ಗಳಿಸಿದರು.
ಅರ್ಜುನ್ ತೆಂಡೂಲ್ಕರ್ ಪದಾರ್ಪಣೆ
ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್ ಟೂರ್ನಿಗೆ ಪದಾರ್ಪಣೆಗೈಯ್ದಿದ್ದಾರೆ.
ಪಂದ್ಯದಲ್ಲಿ ಎರಡು ಓವರ್ ಎಸೆದ ಅರ್ಜುನ್, 17 ರನ್ ನೀಡಿದರಾದರೂ ಯಾವುದೇ ವಿಕೆಟ್ ಪಡೆಯುವಲ್ಲಿ ವಿಫಲರಾದರು.