ಬೆಂಗಳೂರು | ಸಿಎಂ ಮನೆ‌ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನ ಕದ್ದ ಆರೋಪಿ ಬಂಧನ

Date:

Advertisements

ಮುಖ್ಯಮಂತ್ರಿ ಮನೆ‌ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.

ಪ್ರದೀಪ್ ಬಂಧಿತ ಆರೋಪಿ. ಈತ ಮೂಲತಃ ಅಸ್ಸಾಂನವನಾಗಿದ್ದು, ಕಳ್ಳತನ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದನು.  ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ, ಮೆಜೆಸ್ಟಿಕ್‌ನ ಲಾಡ್ಜ್‌ವೊಂದರಲ್ಲಿ ತಂಗಿದ್ದನು.

ಪೊಲೀಸ್ ಠಾಣೆ ಹಾಗೂ ಸದಾ ಪೊಲೀಸ್ ಭದ್ರತೆಯಿಂದಲೇ‌ ಕೂಡಿರುವ ಮುಖ್ಯಮಂತ್ರಿ ನಿವಾಸದ ಕೂಗಳತೆ ದೂರದಲ್ಲಿರುವ, ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ಮಾರ್ವಾಡಿ ಮನೆಯೊಂದರಲ್ಲಿ ಆತನ ಕಳ್ಳತನ ಮಾಡಿದ್ಧಾನೆ. ಮನೆಯ ಕಿಟಕಿಯಿಂದ ಮನೆಯೊಳಗೆ ನುಗ್ಗಿ 2.1 ಕೆಜಿ ಚಿನ್ನಾಭರಣ ಕದ್ದಿದ್ದಾನೆ.

Advertisements

ಮನೆ ಮಾಲೀಕರಾದ ಮಂಜುಳಾ ದೇವಿ ಅವರ ಕುಟುಂಬಸ್ಥರು ಕಾರ್ಯಕ್ರಮ ಹಿನ್ನೆಲೆ ಕಳೆದ ತಿಂಗಳು 17ರಂದು ರಾಜಸ್ಥನಕ್ಕೆ‌ ತೆರಳಿದ್ದರು. ಫೆ.4ರಂದು ಮರಳಿ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.‌

ಪಕ್ಕದ ಮನೆಯ ಕಾಂಪೌಂಡ್ ಹತ್ತಿ, ಗ್ರಿಲ್ ಮುರಿದು ಒಳನುಗ್ಗಿರುವ ಖದೀಮ ಮನೆಯಲ್ಲಿದ್ದ ₹90 ಲಕ್ಷ ಮೌಲ್ಯದ 2 ಕೆಜಿ 250 ಗ್ರಾಂನ ಚಿನ್ನದ ಬಿಸ್ಕತ್, ಆಭರಣಗಳು ಹಾಗೂ ಬೆಳ್ಳಿ ವಸ್ತುಗಳನ್ನ ಎಗರಿಸಿದ್ದಾನೆ.

ಕಳ್ಳತನದ ಬಗ್ಗೆ ಮಂಜುಳಾ ಅವರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಶೇಷಾದ್ರಿಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮನೆಯ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ‌ ನಡೆಸಿ, ಆರೋಪಿಯನ್ನು ಪತ್ತೆ ಮಾಡಿದ್ದಾರೆ. 250 ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಬಾಲಕನ ವಿರುದ್ಧವೂ ಪ್ರಕರಣ ದಾಖಲು

ಆರೋಪಿ ಚಿನ್ನಾಭರಣ ಕದ್ದ ದುಡ್ಡಿನಲ್ಲಿಯೇ ಅಸ್ಸಾಂಗೆ ಹೋಗಿ ಕಾರು ಖರೀದಿ ಮಾಡಿದ್ದಾನೆ. ಈತ ಈ ಹಿಂದೆ ಸದಾಶಿವನಗರದಲ್ಲಿಯೂ ಕಳ್ಳತನ ಮಾಡಿದ್ದನು. ಆದರೆ, ಅಲ್ಲಿ ಆತನಿಗೆ ಏನು ಸಿಕ್ಕಿರಲಿಲ್ಲ. ಹಾಗಾಗಿ, ಶೇಷಾದ್ರಿಪುರಂನ ಮನೆಯನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡಿದ್ದನು.

ಸದ್ಯ ಆರೋಪಿಯನ್ನ ಬಂಧಿಸಿರುವ ಶೇಷಾದ್ರಿಪುರಂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X