ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್'(OTS) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಓಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯ ಸರ್ಕಾರವು 2024ರ ಫೆಬ್ರುವರಿ 22ರಂದು (ಗುರುವಾರ) ‘ಒನ್ ಟೈಮ್ ಸೆಟ್ಲ್ ಮೆಂಟ್'(OTS) ಯೋಜನೆಯ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಫ್ಟ್‌ವೇರ್‌ನಲ್ಲಿ ಓಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲ ನಾಗರಿಕರು ಈಗ ಓಟಿಎಸ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ.
ಬಿಬಿಎಂಪಿಯ ಆನ್‌ಲೈನ್ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ ಓಟಿಎಸ್ ಆದೇಶವನ್ನು ಜಾರಿಗೆ ತಂದಿದ್ದು, ನಾಗರಿಕರು ಸಂಪೂರ್ಣ ಬಡ್ಡಿ ಮನ್ನಾ, ವಂಚನೆ ಪ್ರಕರಣಗಳಲ್ಲಿ ಶೇ.50 ರಷ್ಟು ದಂಡ ಕಡಿತ ಹಾಗೂ ವಸತಿ ಮತ್ತು ಮಿಶ್ರ ಬಳಕೆಗೆ ಪ್ರಕರಣಗಳಲ್ಲಿ ಮಾತ್ರ ಗರಿಷ್ಠ 5 ವರ್ಷಗಳ ಮಿತಿ ಪ್ರಯೋಜನವನ್ನು ತಕ್ಷಣವೇ ಪಡೆಯಬಹುದಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ
ಪಾಲಿಕೆಯ ಅಧಿಕೃತ ವೆಬ್ ಸೈಟ್ https://bbmptax.karnataka.gov.inಗೆ ಭೇಟಿ ನೀಡಿ, ಓಟಿಎಸ್‌ನ ಸಂಪೂರ್ಣ ಪ್ರಯೋಜನವನ್ನು ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ.