ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ: ಸಂಸದ ಹೆಗಡೆ

Date:

Advertisements

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ಪ್ರತ್ಯಕ್ಯವಾಗಿರುವ ಸಂಸದ ಅನಂತ ಕುಮಾರ್ ಹೆಗಡೆ, ಪದೇ-ಪದೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇತ್ತೀಚೆಗೆ, ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದ ಹಗಡೆ, ಇದೀಗ, ಸಿದ್ದರಾಮುಲ್ಲಾ ಖಾನ್‌ ಎಂದಿದ್ದಾರೆ. “ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ” ಎಂದು ಆರೋಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಅವರು ಮಾತನಾಡಿದರು. “ಕ್ಷೇತ್ರಗಳಲ್ಲಿ ಅಭಿವೃದ್ಧಿ ಯೋಜನೆಗಳಿಗಾಗಿ ಶಾಸಕರಿಗೆ ಕೊಡಲು ಸರ್ಕಾರದಲ್ಲಿ ಹಣ ಇಲ್ಲ ಅಂತಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ” ಎಂದಿದ್ದಾರೆ.

” ಹಿಂದುಳಿದವರು, ಎಸ್​ಸಿ, ಎಸ್​ಟಿ ವರ್ಗದವರಿಗೆ ನೀಡಿದ್ದ 11,000 ಕೋಟಿ ರೂ. ನಾಪತ್ತೆಯಾಗಿದೆ. ಕೇಂದ್ರ ಸರ್ಕಾರ ತೆರಿಗೆ ಹಣ ಕೊಟ್ಟಿಲ್ಲವೆಂದು ಹೇಳುತ್ತಾರೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳಕ್ಕೆ ಇಲ್ಲದ ವೇದನೆ ಇವರಿಗೆ ಯಾಕೆ” ಎಂದು ಪ್ರಶ್ನಿಸಿದ್ದಾರೆ.

Advertisements

“ಉಳಿದ ರಾಜ್ಯಗಳಿಗೆ ಎಲ್ಲ ಸರಿ ಇರುವಾಗ, ಸಿದ್ದರಾಮುಲ್ಲಾ ಖಾನ್‌ಗೆ ಯಾಕೆ ತೊಂದರೆ? ದೇಶದಲ್ಲಿ ಶೇ.99.‌9 ರಷ್ಟು ಹಿಂದುಗಳು ತೆರಿಗೆ ಕಟ್ಟುತ್ತಾರೆ. ನಮ್ಮ ಹಣ ತೆಗೆದುಕೊಂಡು ಹೋಗಿ ಮಸೀದಿ, ಚರ್ಚ್‌ಗೆ ಯಾಕೆ ಕೊಟ್ಟಿದ್ದೀರಿ? ನಮ್ಮ ತೆರಿಗೆ ಹಣ ನಮಗೆ ಕೊಡಿ” ಎಂದಿದ್ದಾರೆ.

ರೈತ ಹೋರಾಟದ ಬಗ್ಗೆ ವಾಗ್ದಳಿ ನಡೆಸಿರುವ ಹೆಗಡೆ, “ಅದು ರೈತರ ಹೋರಾಟವಲ್ಲ. ದೇಶದ್ರೋಹಿಗಳ ಹೋರಾಟ. ಪಂಜಾಬ್ ಗಡಿತಲ್ಲಿ ರೈತರ ಹೆಸರಿನಲ್ಲಿ ಖಲಿಸ್ತಾನಿಗಳು ಗಲಾಟೆ ಮಾಡುತ್ತಾರೆ. ಅವರು ಯಾರೂ ರೈತರಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಭಾರತಮಾತೆ ಇಂಥಾ ಕೋಮು ಕ್ರಿಮಿಗಳಿಗೆ ಜನ್ಮ ನೀಡಿ ಸಾಕಿ ಸಲುಹಿರುವುದೇ ಈ ದೇಶದ ದೊಡ್ಡ ದುರಂತ,,, ಕನಿಷ್ಠ ಪಕ್ಷ ತನನ್ನು ಚುನಾಯಿಸಿದ ಜನರಿಗೆ ನಯಾಪೈಸೆ ಕೆಲಸ ಮಾಡದ ಕೇವಲ ಕೋಮುವ್ಯಾಧಿ ರೋಗಗ್ರಸ್ಥ ದ್ವೇಷ ಮಾತುಗಳಿಂದಲೇ ರಾಜಕೀಯದಲ್ಲಿ ನೆಲೆ ಕಂಡುಕೊಳ್ಳಲು ನಕಲಿ ರಾಷ್ಟ್ರವಾದಿಗಳ ಜುಮ್ಲಾ ಪಕ್ಷದಲ್ಲಿ ಮಾತ್ರ ಸಾಧ್ಯ,,, ಒಂಥರಾ ಮಾನಸಿಕ ಭಯೋತ್ಪಾದಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X