ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ನಡೆದ ಭಾರತ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಪೈಕಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ದೊರೆತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ ಪ್ರಭು ಅವರಿಗೆ ಒಂದು ಲಕ್ಷ ನಗದು ಬಹುಮಾನ, ಸ್ಮರಣ ಸಂಚಿಕೆಯೊಂದಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಭಾರತ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.
ತುಮಕೂರು ಜಿಲ್ಲೆಯಾದ್ಯಂತ ಜನವರಿ 26ರಿಂದ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾವು ಫೆಬ್ರವರಿ 23ರವರೆಗೆ ಎರಡು ತಂಡಗಳಲ್ಲಿ ಜಿಲ್ಲೆಯ 330 ಗ್ರಾಮ ಪಂಚಾಯಿತಿ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ, ಪುರಸಭೆ, ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಸಲಾಗಿತ್ತು. ಜಾಥಾಕ್ಕೆ ಸಾರ್ವಜನಿಕವಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರಸ್ತುತ ರಾಜ್ಯ ಮಟ್ಟದಲ್ಲಿ ಮನ್ನಣೆ ಪಡೆದಿದೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್ ಸಿ ಮಹದೇವಪ್ಪ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿದ್ದಾರೆ.