ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿಯು ಮುಂದಿನ ಗುರುವಾರ 100 ಅಭ್ಯರ್ಥಿಗಳ ಹೆಸರಿರುವ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
“ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ನಿರೀಕ್ಷಿತ ಘೋಷಣೆಗೆ ಮುಂಚಿತವಾಗಿ, ಬಿಜೆಪಿ ಗುರುವಾರ 100 ಅಭ್ಯರ್ಥಿಗಳ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ” ಮೂಲಗಳು ತಿಳಿಸಿರುವುದಾಗಿ ವರದಿಯಲ್ಲಿ ಎನ್ಡಿಟಿವಿ ತಿಳಿಸಿವೆ.
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆಬ್ರವರಿ 29ರಂದು ಸಭೆ ಸೇರುವ ಸಾಧ್ಯತೆಯಿದೆ. ಆ ನಂತರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ಪ್ರಧಾನಿ ಮೋದಿ ಅವರು ಕಳೆದ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧಿಸಿ, ಸಂಸದರಾಗಿದ್ದರು. ವಾರಣಾಸಿಯಿಂದ ಎರಡು ಬಾರಿ ಗೆದ್ದಿದ್ದಾರೆ. ಅಮಿತ್ ಶಾ ಅವರು 2019 ರ ಚುನಾವಣೆಯಲ್ಲಿ ಗುಜರಾತ್ನ ಗಾಂಧಿನಗರದಿಂದ ಸ್ಪರ್ಧಿಸಿದ್ದರು. ಅದುವರೆಗೂ ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಅಲ್ಲಿಂದ ಸ್ಪರ್ಧಿಸುತ್ತಿದ್ದರು.
ಮೊದಲ ಪಟ್ಟಿಯು ನಿರ್ಣಾಯಕವಾಗಿದ್ದು, ಎನ್ಡಿಎ ಮೈತ್ರಿಕೂಟವು 543 ಲೋಕಸಭಾ ಸ್ಥಾನಗಳ ಪೈಕಿ 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.
ಕಳೆದ ವಾರ, 370 ಸ್ಥಾನಗಳನ್ನು ಗೆಲ್ಲುವ ಪಕ್ಷದ ಗುರಿಯನ್ನು ಈಡೇರಿಸಲು ಶ್ರದ್ಧೆಯಿಂದ ಕೆಲಸ ಮಾಡಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ ನೀಡಿದ್ದರು. ಮುಂದಿನ 100 ದಿನಗಳು ನಿರ್ಣಾಯಕವಾದವು ಎಂದು ತಿಳಿಸಿದ್ದರು.
ಇದನ್ನು ಓದಿದ್ದೀರಾ? ಕಾಂಗ್ರೆಸ್ ಸೇರುವ ವದಂತಿ ನಡುವೆಯೇ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಜೆಡಿಎಸ್ ಶಾಸಕ
“ಮುಂದಿನ 100 ದಿನಗಳಲ್ಲಿ ನಾವೆಲ್ಲರೂ ಪ್ರತಿಯೊಬ್ಬ ಹೊಸ ಮತದಾರರನ್ನು, ಪ್ರತಿಯೊಬ್ಬ ಫಲಾನುಭವಿ, ಪ್ರತಿ ಸಮುದಾಯವನ್ನು ತಲುಪಬೇಕು. ನಾವು ಎಲ್ಲರ ವಿಶ್ವಾಸ ಗೆಲ್ಲಬೇಕು. ಎನ್ಡಿಎ ಕೂಟದ ಸ್ಥಾನವನ್ನು 400ಕ್ಕೆ ಕೊಂಡೊಯ್ಯಲು ಹಾಗೂ ಬಿಜೆಪಿ 370 ಕ್ಷೇತ್ರಗಳನ್ನು ಗೆಲ್ಲಲು ಶ್ರಮಿಸಬೇಕು” ಎಂದು ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ಮೋದಿ ಹೇಳಿದ್ದರು.
