ನನ್ನ ವಿರುದ್ಧ ಪ್ರಾಯೋಜಿತ ಅಪಪ್ರಚಾರ ನಡೆಯುತ್ತಿದೆ: ಸಚಿವೆ ಶೋಭಾ ಕರಂದ್ಲಾಜೆ

Date:

Advertisements

ಚಿಕ್ಕಮಗಳೂರು-ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಸಂಸದೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ‘ಗೋ ಬ್ಯಾಕ್ ಶೋಭಾ!’ ಅಭಿಯಾನ ನಡೆಯುತ್ತಿದೆ. ಕರಂದ್ಲಾಜೆ ವಿರುದ್ಧ ಅಸಮಾಧಾನಗೊಂಡಿರುವ ಕ್ಷೇತ್ರದ ಜನರು ಅವರ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ. ಆದರೆ, ಈ ಅಭಿಯಾನ ಪ್ರಾಯೋಜಿತವಾದದ್ದು, ಇದು ಅವಕಾಶವಾದಿ ರಾಜಕಾರಣ ಎಂದು ಕರಂದ್ಲಾಜೆ ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಮೂರನೇ ಅವಧಿಗೆ ಸ್ಪರ್ಧಿಸಲು ಕರಂದ್ಲಾಜೆ ಬಿಜೆಪಿ ಟಿಕೆಟ್‌ ರೇಸ್‌ನಲ್ಲಿದ್ದಾರೆ. ಅವರು ಆ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರಗಳಿಗೆ ಹೋಗಬಹುದು ಎಂಬ ಊಪಾಪೋಹಗಳು ಇದ್ದವು. ಆದರೆ, ಎಲ್ಲಿಯೂ ಹೋಗುವುದಿಲ್ಲ. ಇಲ್ಲಿಯೇ ಸ್ಪರ್ಧಿಸುತ್ತೇನೆ ಎಂದಿರುವ ಕರಂದ್ಲಾಜೆ, ‘ನನ್ನ ವಿರುದ್ಧ ಪ್ರಯೋಜಿತ ಅಪಪ್ರಚಾರ ನಡೆಯುತ್ತಿದೆ’ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, “ನನ್ನ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಕಂಡು, ಮತದಾರರು ನನ್ನನ್ನು ಬೆಂಬಲಿಸುವುದು ಖಚಿತ. ನನ್ನ ವಿರುದ್ಧ ವದಂತಿಗಳನ್ನು ಹರಡುತ್ತಿವೆ. ಇಂತಹ ವಿಚಾರಗಳು ರಾಜಕೀಯದಲ್ಲಿ ಸಾಮಾನ್ಯ. ಅವುಗಳನ್ನು ಹೇಗೆ ಎದುರಿಸಬೇಕೆಂದು ನನಗೆ ತಿಳಿದಿದೆ” ಎಂದು ಹೇಳಿದ್ದಾರೆ.

Advertisements

“ಬೇರೆಯವರ ಚಾರಿತ್ರ್ಯ ಹರಣ ಮಾಡಿ, ಅವಮಾನಿಸಿ, ದುರುದ್ದೇಶಪೂರಿತ ಅಪಪ್ರಚಾರದಲ್ಲಿ ತೊಡಗಿ ಟಿಕೆಟ್ ಕೇಳಬಾರದು. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಈ ಮಟ್ಟಕ್ಕೆ ಇಳಿಯುವುದಿಲ್ಲ. ಅವರು ನಿಜವಾದ ಪಕ್ಷದ ಕಾರ್ಯಕರ್ತರಾಗಿದ್ದರೆ, ನನ್ನ ಅಧಿಕಾರಾವಧಿಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ನನ್ನೊಂದಿಗೆ ಬಹಿರಂಗ ಚರ್ಚೆಗೆ ಬರಲಿ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: 2013ರಲ್ಲಿ ಯುಪಿಎ ಸ್ಥಾಪಿಸಿದ್ದ ಚುನಾವಣಾ ಟ್ರಸ್ಟ್ ಯೋಜನೆಯಿಂದ ಬಿಜೆಪಿ ಫಲಾನುಭವಿಯಾಗಿದ್ದು ಹೇಗೆ?

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ರೇಸ್‌ನಲ್ಲಿ ಪ್ರಮೋದ್ ಮಧ್ವರಾಜ್ ಮುಂಚೂಣಿಯಲ್ಲಿದ್ದಾರೆ. “ಕ್ಷೇತ್ರದಲ್ಲಿ ಸಮೀಕ್ಷೆ ನಡೆದಿದೆ. ಸಮೀಕ್ಷೆಯಲ್ಲಿ ನಾನೇ ಮುಂಚೂಣಿಯಲ್ಲಿದ್ದೇನೆ. ನನ್ನ ಅರ್ಹತೆಯನ್ನು ನಿರ್ಣಯಿಸಿ ಟಿಕೆಟ್ ಕೇಳಿದ್ದೇನೆ. ನಾನು ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿದ್ದೇನೆ” ಎಂದು ಮಧ್ವರಾಜ್ ಹೇಳಿದ್ದಾರೆ.

ಕ್ಷೇತ್ರದಿಂದ ಸ್ಪರ್ಧಿಸುವ ಹಕ್ಕಿನ ವಿಚಾರದಲ್ಲಿ ಕರಂದ್ಲಾಜೆ ಅವರ ಸಮರ್ಥನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಶೋಭಾ ವಿರುದ್ಧ ದುರುದ್ದೇಶಪೂರಿತ ಪ್ರಚಾರ ನಡೆಯುತ್ತಿದೆ ಎಂಬುದರಲ್ಲಿ ನನಗೆ ನಂಬಿಕೆ ಇಲ್ಲ. ಟಿಕೆಟ್ ಕೇಳುವ ಹಕ್ಕು ಶೋಭಾ ಅವರಿಗೆ ಇದೆ. ಸಾಮಾನ್ಯ ಕಾರ್ಯಕರ್ತನಾಗಿ ನನಗೂ ಹಕ್ಕಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್‌ ನಿರ್ಧರಿಸಲಿದೆ. ಯಾವ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ಆ ವ್ಯಕ್ತಿಯ ಪರವಾಗಿ ಕೆಲಸ ಮಾಡುತ್ತೇನೆ’’ ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X