ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ ಬೋರ್ಡ್‌ಗಳು ಬದಲಾಗದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಮಫಲಕಕ್ಕೆ ಕೆಲವರು ಆಸಕ್ತಿ ತೋರಿಸಿಲ್ಲ. ನಾಮಫಲಕದ ಜೊತೆಗೆ ಕನ್ನಡಿಗರಿಗೆ ಉದ್ಯೋಗ ಬೇಕು. ಐಟಿ-ಬಿಟಿ ಕಂಪನಿಗಳಲ್ಲಿ ಉದ್ಯೋಗವನ್ನ ಕೊಡಬೇಕು ಎಂದು ಆಗ್ರಹ ಮಾಡಿದ್ದಾರೆ. ಮುಂದಿನ ತಿಂಗಳು ಎಲ್ಲಾ ಸಂಘಟನೆಗಳನ್ನು ಸೇರಿ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕನ್ನಡ ಮರೆತ ಅಂಗಡಿ ಮಾಲೀಕರ ವಿರುದ್ಧ ಕನ್ನಡ ಪರ ಸಂಘಟನೆಗಳು ಇತ್ತೀಚೆಗೆ ಪ್ರತಿಭಟಿಸಿದ್ದವು. ನಂತರ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ಸೂಚನೆಯನ್ನು ಸರ್ಕಾರ ನೀಡಿತ್ತು. ಫೆಬ್ರವರಿ 28ರ ತನಕ ಕಾಲಾವಕಾಶ ನೀಡಿತ್ತು.