ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. “ಇಡಿ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದ ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ” ಎಂದು ವಿವರಿಸಿದರು.

“ನರೇಂದ್ರಮೋದಿಯವರ ಮಂತ್ರಿ ಮಂಡಲದಲ್ಲಿ ಕೇಂದ್ರ ಸಚಿವ ಆಗಿದ್ದ ಅನಂತಕುಮಾರ ಹೆಗ್ಡೆ, ‘ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಘೋಷಿಸಿದ್ದರು. ಈ ಘೋಷಣೆಯನ್ನು ಪ್ರಧಾನಿ ಮೋದಿಯವರಾಗಲೀ, ಅಮಿತ್ ಶಾ ಆಗಲೀ, ಬಿಜೆಪಿಯಾಗಲೀ, ಆರ್‌ಎಸ್‌ಎಸ್‌ ಆಗಲಿ ಖಂಡಿಸಲಿಲ್ಲ. ವಿರೋಧಿಸಲಿಲ್ಲ. ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಅಜೆಂಡಾವನ್ನು, ಉದ್ದೇಶವನ್ನು ಅನಂತಕುಮಾರ ಹೆಗ್ಡೆ ಬಾಯಲ್ಲಿ ಹೇಳಿಸಿದರು. ಈ ಬಗ್ಗೆ ಇಡೀ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು” ಎಂದರು.

Advertisements

ಈ ಸದ್ದಿ ಓದಿದ್ದೀರಾ?: ಲೋಕಸಭಾ ಚುನಾವಣೆ | ಕಾಣೆಯಾಗಿದ್ದ ಹೆಗಡೆಗೆ ಸಿಗುವುದೇ ಟಿಕೆಟು; ಕಾಂಗ್ರೆಸ್‌ ಕೈ ಹಿಡಿಯುವುದೇ ಉ.ಕ?

“ಈ ದೇಶದ, ನಮ್ಮ ನಾಡಿನ ದುಡಿಯುವವರ ಹಕ್ಕುಗಳು, ಶ್ರಮಿಕರು, ರೈತರು, ಕಾರ್ಮಿಕರು ಮತ್ತು ಮಹಿಳಾ ಸಮುದಾಯದ ಅಸ್ತಿತ್ವ ಅಡಗಿರುವುದೇ ನಮ್ಮ ಸಂವಿಧಾನದಲ್ಲಿ. ಸಂವಿಧಾನ ಬದಲಾವಣೆಯಿಂದ ಈ ಎಲ್ಲಾ ಸಮುದಾಯಗಳು ಮರಳಿ ಗುಲಾಮಗಿರಿಗೆ ದೂಡಲ್ಪಡುತ್ತಾರೆ. ಸಂವಿಧಾನ ಇಲ್ಲದ ಸಂದರ್ಭದಲ್ಲಿ ಶೂದ್ರ, ದಲಿತ ಮತ್ತು ಶ್ರಮಿಕರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿತ್ತು ಎನ್ನುವುದನ್ನು ಸ್ಮರಿಸಿಕೊಳ್ಳಿ” ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಇಂಡಿಯಾ ಒಕ್ಕೂಟದ ಮುಖಂಡ ಫಾರೂಕ್ ಅಬ್ದುಲ್ಲಾ, ಸೀತಾರಾಮ್ ಯೆಚೂರಿ ಸೇರಿ 18 ರಾಜ್ಯಗಳ 40 ಮಂದಿ ಮುಖಂಡರು, 12 ಪಕ್ಷಗಳ ನಾಯಕರು ಸಂವಿಧಾನ ರಕ್ಷಣೆ ಮಾಡಬೇಕಾದ ಅನಿವಾರ್ಯತೆ ಕುರಿತು ಜನರನ್ನು ಜಾಗೃತಗೊಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X