ಅಪರಿಚಿತ ದುಷ್ಕರ್ಮಿಗಳು ಭಾರತ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಹರಿಯಾಣ ಘಟಕದ ಅಧ್ಯಕ್ಷ ನೇಫ್ ಸಿಂಗ್ ರಾತಿ ಅವರನ್ನು ಚಂಡಿಗಢದ ಜಾಜ್ಜರ್ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ನೇಫ್ ಸಿಂಗ್ ರಾತಿ ಅವರು ಮಾಜಿ ಶಾಸಕರಾಗಿದ್ದು, ಜಾಜ್ಜರ್ನ ಬಹದ್ದೂರ್‌ಘರ್‌ನಲ್ಲಿ ಎಸ್‌ಯುವಿನೊಂದಿಗೆ ಪ್ರಯಾಣಿಸುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಅಪರಿಚಿತರು ದಾಳಿ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ
ತಮ್ಮ ಪ್ರಾಣಕ್ಕೆ ಬೆದರಿಕೆಯಿದ್ದು, ಸರ್ಕಾರ ಸರ್ಕಾರ ಭದ್ರತೆ ಒದಗಿಸಲು ವಿಫಲವಾಗಿದೆ ಎಂದು ನೇಫ್ ಸಿಂಗ್ ರಾತಿ ಇತ್ತೀಚಿಗಷ್ಟೆ ಆರೋಪಿಸಿದ್ದರು. ಅಲ್ಲದೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
