ಭಾರತ ತಂಡ ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳ ಗೆಲುವು ದಾಖಲಿಸಿ ಐದು ಟೆಸ್ಟ್‌ಗಳ ಸರಣಿಯನ್ನು 3-1ರಿಂದ ಜಯಿಸಿದೆ.
ರಾಂಚಿಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್ ನೀಡಿದ 192 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತನ್ನ ಎರಡನೇ ಇನಿಂಗ್ಸ್‌ನಲ್ಲಿ 61 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವು ಪಡೆದುಕೊಂಡಿತು. ನಾಯಕ ರೋಹಿತ್ ಶರ್ಮಾ(55), ಶುಭಮನ್‌ಗಿಲ್ ಅಜೇಯ 52, ಧ್ರವ್ ಜುರೆಲ್ ಅಜೇಯ 39 ಹಾಗೂ ಯಶಸ್ವಿ ಜೈಸ್ವಾಲ್ 37 ರನ್ ಗಳಿಸಿ ಗೆಲುವಿನ ರೂವಾರಿಯಾದರು.
ಪ್ರವಾಸಿ ಇಂಗ್ಲೆಂಡ್ ಮೊದಲ ಮತ್ತು ಎರಡನೇ ಇನಿಂಗ್ಸ್‌ಗಳಲ್ಲಿ 353 ಹಾಗೂ 145 ರನ್ ಗಳಿಸಿದ್ದರೆ. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 307 ಮತ್ತು 192/5 ರನ್ ಗಳಿಸಿ ಜಯದ ನಗೆ ಬೀರಿತು. ಕೊನೆಯ ಟೆಸ್ಟ್ ಮಾ.7 ರಂದು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ