ಕರಂದ್ಲಾಜೆ ವಿರುದ್ದ ಷಡ್ಯಂತ್ರ ನಡೀತಿದೆ ಎಂದ ಬಿಎಸ್‌ವೈ; ಬಾಸ್ ಈಸ್ ಆಲ್ವೇಸ್ ರೈಟ್ ಎಂದ ಸಿ ಟಿ ರವಿ

Date:

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಕೇಳಿಲ್ಲ. ಈ ಬಗ್ಗೆ ಈಗಾಗಲೇ ಹತ್ತಾರು ಬಾರಿ ಹೇಳಿದ್ದೇನೆ. ನನಗೆ ಗೊತ್ತಿರುವುದು ಕೇವಲ ಪಕ್ಷ ನಿಷ್ಠೆ ಮತ್ತು ಪರಿಶ್ರಮ ಮಾತ್ರ ಎಂದು ಸಿ ಟಿ ರವಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ 36 ವರ್ಷದ ರಾಜಕೀಯ ಜೀವನದಲ್ಲಿ ಪಕ್ಷನಿಷ್ಠೆ ಪ್ರಶ್ನಾರ್ಥಕ ಚಿಹ್ನೆಯಾಗಲು ಅವಕಾಶ ಕೊಟ್ಟಿಲ್ಲ. ಪಂಚಾಯತ್​​ನಿಂದ ಪಾರ್ಲಿಮೆಂಟ್ ವರೆಗೂ ಬಿಜೆಪಿ ಗೆಲ್ಲಿಸಬೇಕು” ಎಂದರು.

“ನಮ್ಮ ಗುರಿ ಒಂದೇ, ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಈ ಬಗ್ಗೆ ಹೋರಾಟ ಮಾಡಿದ್ದೇನೆ. ಯಾರು ಯಾರು ಒಂದೊಂದು ಚುನಾವಣೆಯಲ್ಲಿ ಒಂದೊಂದು ತರಹ ವರ್ತನೆ ಮಾಡಿರುತ್ತಾರೋ ಅವರಿಗೆ ಇದು ಅನ್ವಯ ಆಗುತ್ತದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಚಿಕ್ಕಮಗಳೂರಿನಲ್ಲಿ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರಲ್ಲಾ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಯಡಿಯೂರಪ್ಪ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಹೀಗಾಗಿ ‘ಬಾಸ್ ಈಸ್ ಆಲ್ವೇಸ್ ರೈಟ್” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ನಿನ್ನೆ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರಿ ಖರ್ಚಿನಲ್ಲಿ ಸಂವಿಧಾನ ಜಾಗೃತಿ ದಿನ ಕಾರ್ಯಕ್ರಮ ಏರ್ಪಡಿಸಿದೆ. ಆದರೆ, ಅದರಲ್ಲಿ ಸಂವಿಧಾನ ಜಾಗೃತಿ ಬಗ್ಗೆ ಮಾತನಾಡಿದ್ದು ಕಡಿಮೆ. ಪ್ರಧಾನಿ ಮೋದಿಯನ್ನು ಟೀಕಿಸಿ, ಸುಳ್ಳು ಆರೋಪ ಹೊರಿಸಿ, ತಪ್ಪು ಭಾವನೆ ಬರುವಂತೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಮಾನ” ಎಂದು ಹೇಳಿದರು.

“ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೇ ಅದರ ನಾಯಕರು ಸಂವಿಧಾನ ದುರ್ಬಳಕೆ ಮಾಡಿದ್ದಾರೆ. ಈಗ ಏಕಾಏಕಿ ಸಂವಿಧಾನ ಬಗ್ಗೆ ನೆನಪಾಗಿದ್ದು ಅಂಬೇಡ್ಕರ್ ಮೇಲಿನ ಪ್ರೀತಿಯಿಂದ ಅಲ್ಲ. ಇಂದು ಅಂಬೇಡ್ಕರ್ ಪೋಟೋ ಬಳಸುವ ನೈತಿಕತೆ ಕಾಂಗ್ರೆಸ್​​ಗೆ ಇಲ್ಲ” ಎಂದು ವಾಗ್ದಾಳಿ ನಡೆಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...